ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ ಇದೇ 17ರಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಕಾಲ ನಡೆಯಲಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮನೋಹರ್ ಲಾಲ್ ಮಾತನಾಡಿ, ಈ ಬಾರಿ ಸ್ವಭಾವ ಸ್ವಚ್ಛತೆ- ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ ಅಭಿಯಾನ ನಡೆಯಲಿದೆ. ಈ ಸಮಯದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…
ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…
ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…
ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490