Advertisement
ಸುದ್ದಿಗಳು

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

Share

ಕರ್ನಾಟಕದ ಅತಿ ದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ಮಂಗಳೂರಿನ ಅಶ್ಮಿತ್ ಎ.ಜೆ. ಹೊರಹೊಮ್ಮಿದ್ದಾರೆ. ಅಂತಿಮ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅಶ್ಮಿತ್, ₹20 ಲಕ್ಷ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಾರ್ಯಕ್ರಮದ ಪ್ರತಿ ಸರಣಿಯಲ್ಲೂ ತಮ್ಮ ಗಾಯನದ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದ ಅಶ್ಮಿತ್, ಹಲವು ಬಾರಿ ಗೋಲ್ಡನ್ ಬಜರ್ ಪುರಸ್ಕಾರಕ್ಕೂ ಭಾಜನರಾಗಿದ್ದರು. ಇದೀಗ ಅಂತಿಮ ಸುತ್ತಿನಲ್ಲಿ ಗಮನಾರ್ಹ ಪ್ರದರ್ಶನ ನೀಡಿ ‘ಸರಿಗಮಪ 2026’ರ ವಿಜೇತರಾಗಿ ಹೊರಹೊಮ್ಮಿದ್ದಾರೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಜಯರಾಮ ಹಾಗೂ ರೇವತಿ ದಂಪತಿಯ ಪುತ್ರರಾಗಿರುವ ಅಶ್ಮಿತ್, ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಶಾಲಾ ಶಿಕ್ಷಣದ ಜೊತೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ, ವಯಲಿನ್ ಹಾಗೂ ಮೃದಂಗ ವಾದನವನ್ನೂ ಅಭ್ಯಾಸ ಮಾಡುತ್ತಿದ್ದಾರೆ.

ಎಲ್‌ಕೆಜಿ ಹಂತದಿಂದಲೇ ಮಂಗಳೂರಿನ “ಶ್ರೀ ಸಂಗೀತ ಪಾಠಶಾಲೆ”ಯಲ್ಲಿ ಸಂಧ್ಯಾ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿರುವ ಅಶ್ಮಿತ್, ತಮ್ಮ ಸಂಗೀತ ಪ್ರತಿಭೆಯ ಮೂಲಕ ಇದೀಗ ರಾಜ್ಯದ ಗಮನ ಸೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸಂಗೀತ ಕ್ಷೇತ್ರಕ್ಕೆ ಕೀರ್ತಿ ತಂದಿರುವ ಅಶ್ಮಿತ್ ಅವರ ಸಾಧನೆಗೆ “ಶ್ರೀ ಸಂಗೀತ ಪಾಠಶಾಲೆ”ಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಗುರುಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸಂಗೀತದ ಪಯಣಕ್ಕೆ ಹೊಸ ಮೈಲುಗಲ್ಲು : ಶಾಲಾ ಶಿಕ್ಷಣದ ಜತೆಗೆ ಶಾಸ್ತ್ರೀಯ ಸಂಗೀತ, ವಯಲಿನ್ ಮತ್ತು ಮೃದಂಗವನ್ನು ಕಲಿಯುತ್ತಾ ಬಂದಿರುವ ಅಶ್ಮಿತ್, ‘ಸರಿಗಮಪ’ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ. ಮಂಗಳೂರಿನಿಂದ ರಾಜ್ಯಮಟ್ಟದ ಸಂಗೀತ ವೇದಿಕೆಗೆ ತೆರಳಿ ವಿಜೇತರಾಗಿ ಹೊರಹೊಮ್ಮಿರುವುದು ಕರಾವಳಿಯ ಸಂಗೀತಾಸಕ್ತರಲ್ಲೂ ಸಂಭ್ರಮ ಮೂಡಿಸಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Mangaluru’s Ashmith A.J. has emerged as the winner of Zee Kannada’s ‘Sa Re Ga Ma Pa 2026’ and won a cash prize of ₹20 lakh. Originally from Punacha village in Bantwal taluk of Dakshina Kannada, Ashmith has been learning Carnatic music since his LKG days and also trains in violin and mridangam.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

11 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

13 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

13 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

16 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago