ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.
ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಾಸಕರಿಗೆ ಮೊಬೈಲ್ ಕರೆ ಮಾಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು.
ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…