ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ವಿಭಾಗದ ಚಿನ್ನದ ಪದಕಕ್ಕಾಗಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅ.3ರಂದು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.
ನಿಶಿನ್‌ನ ಐಚಿ ಪ್ರಿಫೆಕ್ಚರಲ್ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯಲಿರುವ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಟಿ20 ಮಾದರಿಯಲ್ಲಿ ಪಂದ್ಯ ನಡೆಯಲಿದೆ.
ಸೆಮಿಫೈನಲ್‌ನಲ್ಲಿ ಭಾರತ 124 ರನ್‌ಗಳಿಂದ ಶ್ರೀಲಂಕಾವನ್ನು ಮಣಿಸಿ ಫೈನಲ್ ಪ್ರವೇಶಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 170 ರನ್‌ಗಳ ಗುರಿ ನೀಡಿದ್ದು, ಈಶಾನ್ ಕಿಶನ್ ಅಜೇಯ 80 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಗುರಿ ಬೆನ್ನತ್ತಿದ ಶ್ರೀಲಂಕಾ 45 ರನ್‌ಗಳಿಗೆ ಆಲೌಟ್ ಆಯಿತು.
ಮತ್ತೊಂದೆಡೆ ಪಾಕಿಸ್ತಾನ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.
ಇದೀಗ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್‌ನಲ್ಲಿ ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ನಡುವೆ ಹಣಾಹಣಿ ನಡೆಯಲಿದ್ದು, ಎರಡೂ ತಂಡಗಳು ಅಗ್ರಸ್ಥಾನಕ್ಕಾಗಿ ಕಣಕ್ಕಿಳಿಯಲಿವೆ.
India and Pakistan will meet in the men’s cricket final at the 2026 Asian Games in Japan on October 3. The T20 final will begin at 10 AM IST at Aichi Prefectural Korogi Sports Park in Nisshin, with India entering the final after a 124-run win over Sri Lanka and Pakistan advancing with a six-wicket victory over Bangladesh.


