Advertisement
ಸುದ್ದಿಗಳು

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

Share

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ ಪುರುಷರ ಕ್ರಿಕೆಟ್‌ ವಿಭಾಗದ ಚಿನ್ನದ ಪದಕಕ್ಕಾಗಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅ.3ರಂದು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ನಿಶಿನ್‌ನ ಐಚಿ ಪ್ರಿಫೆಕ್ಚರಲ್‌ ಕೊರೋಗಿ ಸ್ಪೋರ್ಟ್ಸ್‌ ಪಾರ್ಕ್‌ನಲ್ಲಿ ನಡೆಯಲಿರುವ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಟಿ20 ಮಾದರಿಯಲ್ಲಿ ಪಂದ್ಯ ನಡೆಯಲಿದೆ.

ಸೆಮಿಫೈನಲ್‌ನಲ್ಲಿ ಭಾರತ 124 ರನ್‌ಗಳಿಂದ ಶ್ರೀಲಂಕಾವನ್ನು ಮಣಿಸಿ ಫೈನಲ್‌ ಪ್ರವೇಶಿಸಿತು. ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 170 ರನ್‌ಗಳ ಗುರಿ ನೀಡಿದ್ದು, ಈಶಾನ್‌ ಕಿಶನ್‌ ಅಜೇಯ 80 ರನ್‌ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಗುರಿ ಬೆನ್ನತ್ತಿದ ಶ್ರೀಲಂಕಾ 45 ರನ್‌ಗಳಿಗೆ ಆಲೌಟ್‌ ಆಯಿತು.

ಮತ್ತೊಂದೆಡೆ ಪಾಕಿಸ್ತಾನ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ ಪ್ರವೇಶಿಸಿದೆ.

ಇದೀಗ ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ನಲ್ಲಿ ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ನಡುವೆ ಹಣಾಹಣಿ ನಡೆಯಲಿದ್ದು, ಎರಡೂ ತಂಡಗಳು ಅಗ್ರಸ್ಥಾನಕ್ಕಾಗಿ ಕಣಕ್ಕಿಳಿಯಲಿವೆ.

India and Pakistan will meet in the men’s cricket final at the 2026 Asian Games in Japan on October 3. The T20 final will begin at 10 AM IST at Aichi Prefectural Korogi Sports Park in Nisshin, with India entering the final after a 124-run win over Sri Lanka and Pakistan advancing with a six-wicket victory over Bangladesh.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

49 minutes ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

1 hour ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

2 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

12 hours ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

19 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

20 hours ago