ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ….! | ಅಸ್ಸಾಂ ಸರ್ಕಾರ ಘೋಷಣೆ |

Advertisement
Advertisement

ಹೈಯರ್ ಸೆಕೆಂಡರಿ ಪರೀಕ್ಷೆಗಳಲ್ಲಿ (12ನೇ ತರಗತಿ )ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಸುಮಾರು 36,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಹೆಚ್ಚಾಗಿ ಹುಡುಗಿಯರಿಗೆ ಉಚಿತ ಸ್ಕೂಟರ್ ವಿತರಿಸುವುದಾಗಿ ಅಸ್ಸಾಂ ಸರ್ಕಾರ ಘೋಷಿಸಿದೆ. ಸುಮಾರು 258 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಶಿಕ್ಷಣ ಸಚಿವ ರನೋಜ್ ಪೆಗು ಅವರು ಸುದ್ದಿಗಾರರಿಗೆ ತಿಳಿಸಿದರು.

Advertisement

ಒಟ್ಟು 35,800 ವಿದ್ಯಾರ್ಥಿಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ 29,748 ಬಾಲಕಿಯರು ಮತ್ತು 6,052 ಬಾಲಕರು ಸ್ಕೂಟರ್ ಗಳನ್ನು ಪಡೆಯಲಿದ್ದಾರೆ ಎಂದು ಅವರು ಹೇಳಿದರು. ಉನ್ನತ ಶಿಕ್ಷಣ ಇಲಾಖೆಯು ಇದೇ ವೇಳೆ ವಿದ್ಯಾರ್ಥಿಗಳಿಗೆ ನೋಂದಣಿ ಮತ್ತು ವಿಮೆಗಾಗಿ ಆರ್ಥಿಕ ನೆರವು ನೀಡುತ್ತದೆ ಎಂದು ಅವರು ತಿಳಿಸಿದರು.

Advertisement
Advertisement

ಇದಲ್ಲದೆ ಪ್ರಾಂತೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕರ ಮಾಸಿಕ ಸಂಭಾವನೆಯನ್ನು 55,000 ರೂ.ಗೆ ಹೆಚ್ಚಿಸಲು ಸಂಪುಟ ನಿರ್ಧರಿಸಿದೆ ಎಂದು ಸಚಿವರು ಹೇಳಿದರು. ರಾಜ್ಯ ಸರ್ಕಾರ ನೀಡುವ ಆರ್ಥಿಕ, ಶೈಕ್ಷಣಿಕ ಮತ್ತು ಉದ್ಯೋಗ ಸವಲತ್ತುಗಳನ್ನು ಪಡೆಯಲು ಸಹಾಯ ಮಾಡಲು ಮಿಷನ್ ಭೂಮಿಪುತ್ರ ಅಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಜಾತಿ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ….! | ಅಸ್ಸಾಂ ಸರ್ಕಾರ ಘೋಷಣೆ |"

Leave a comment

Your email address will not be published.


*