ಹೈಯರ್ ಸೆಕೆಂಡರಿ ಪರೀಕ್ಷೆಗಳಲ್ಲಿ (12ನೇ ತರಗತಿ )ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಸುಮಾರು 36,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಹೆಚ್ಚಾಗಿ ಹುಡುಗಿಯರಿಗೆ ಉಚಿತ ಸ್ಕೂಟರ್ ವಿತರಿಸುವುದಾಗಿ ಅಸ್ಸಾಂ ಸರ್ಕಾರ ಘೋಷಿಸಿದೆ. ಸುಮಾರು 258 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಶಿಕ್ಷಣ ಸಚಿವ ರನೋಜ್ ಪೆಗು ಅವರು ಸುದ್ದಿಗಾರರಿಗೆ ತಿಳಿಸಿದರು.
ಒಟ್ಟು 35,800 ವಿದ್ಯಾರ್ಥಿಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ 29,748 ಬಾಲಕಿಯರು ಮತ್ತು 6,052 ಬಾಲಕರು ಸ್ಕೂಟರ್ ಗಳನ್ನು ಪಡೆಯಲಿದ್ದಾರೆ ಎಂದು ಅವರು ಹೇಳಿದರು. ಉನ್ನತ ಶಿಕ್ಷಣ ಇಲಾಖೆಯು ಇದೇ ವೇಳೆ ವಿದ್ಯಾರ್ಥಿಗಳಿಗೆ ನೋಂದಣಿ ಮತ್ತು ವಿಮೆಗಾಗಿ ಆರ್ಥಿಕ ನೆರವು ನೀಡುತ್ತದೆ ಎಂದು ಅವರು ತಿಳಿಸಿದರು.
ಇದಲ್ಲದೆ ಪ್ರಾಂತೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕರ ಮಾಸಿಕ ಸಂಭಾವನೆಯನ್ನು 55,000 ರೂ.ಗೆ ಹೆಚ್ಚಿಸಲು ಸಂಪುಟ ನಿರ್ಧರಿಸಿದೆ ಎಂದು ಸಚಿವರು ಹೇಳಿದರು. ರಾಜ್ಯ ಸರ್ಕಾರ ನೀಡುವ ಆರ್ಥಿಕ, ಶೈಕ್ಷಣಿಕ ಮತ್ತು ಉದ್ಯೋಗ ಸವಲತ್ತುಗಳನ್ನು ಪಡೆಯಲು ಸಹಾಯ ಮಾಡಲು ಮಿಷನ್ ಭೂಮಿಪುತ್ರ ಅಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಜಾತಿ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…