ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 3 ಕೋಟಿ ಮೌಲ್ಯದ ಬರ್ಮಾ ಅಡಿಕೆ ವಶ |

February 14, 2023
10:46 PM

ಮಿಜೋರಾಂನಲ್ಲಿ ನಡೆದ  ಜಂಟಿ ಕಾರ್ಯಾಚರಣೆಯಲ್ಲಿ 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಬರ್ಮಾ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಬರ್ಮಾದಿಂದ ಅಕ್ರಮವಾಗಿ ಅಡಿಕೆಯನ್ನು ಭಾರತಕ್ಕೆ ಸಾಗಿಸಲಾಗುತ್ತಿತ್ತು.

ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿಗಳು ಮತ್ತು ಗಡಿ ಕಸ್ಟಮ್ಸ್ ಇಲಾಖೆಯು ಮಿಜೋರಾಂನ ಮೆಲ್‌ಬುಕ್ ಬಳಿ ಭಾರತ-ಮ್ಯಾನ್ಮಾರ್ ಅಂತರಾಷ್ಟ್ರೀಯ ಗಡಿಯಲ್ಲಿ ಜಂಟಿ ಕಾರ್ಯಾಚರಣೆಯನ್ನು ನಡೆಸಿತ್ತು. ಕಾರ್ಯಾಚರಣೆ ವೇಳೆ ಸುಮಾರು 780 ಚೀಲ ಬರ್ಮಾ ಅಡಿಕೆ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಡಿಕೆಯನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು 3.51 ಕೋಟಿ ರೂಪಾಯಿ.

ಕಳೆದ ಡಿಸೆಂಬರ್‌ನಲ್ಲಿ ಅಸ್ಸಾಂ ಪೊಲೀಸರು ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದರು. ಮಿಜೋರಾಂನಿಂದ ಅಕ್ರಮವಾಗಿ ಸಾಗಿಸಲಾಗಿದ್ದ ಅಡಿಕೆಯನ್ನು ಕ್ಯಾಚಾರ್ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದರು. ಅಂದು ತೈಲ ಟ್ಯಾಂಕರ್‌ನಲ್ಲಿ ಬಚ್ಚಿಟ್ಟಿದ್ದ 2000 ಕಿಲೋಗ್ರಾಂಗಳಷ್ಟು ಬರ್ಮಾ ಅಡಿಕೆಗಳನ್ನು ವಶಪಡಿಸಿಕೊಂಡಿದ್ದರು. ಈ ಜಾಲದ ಹಿಂದೆ ಪ್ರಭಾವಿ ವ್ಯಕ್ತಿಗಳೂ ಇದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದಾದ ಬಳಿಕ ನಾಗ್ಪುರ ನಿವಾಸಿಯನ್ನು ಅಂದು ಬಂಧಿಸಲಾಗಿತ್ತು. ಆತ ಬರ್ಮಾದಿಂದ ಅಕ್ರಮವಾಗಿ ಅಡಿಕೆಯನ್ನು ಕಳ್ಳಸಾಗಣೆ ಮಾಡಿ ವಿವಿಧ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದರು. ಇದೀಗ ಈ ಪ್ರಕರಣದ ಬಗ್ಗೆಯೂ ತನಿಖೆ ನಡೆಸುತ್ತಿದ್ದು, ಅಡಿಕೆ ಕಳ್ಳಸಾಗಾಣಿಗೆಯ ಜಾಲವನ್ನು ಪತ್ತೆ ಮಾಡುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror