ಮಿಜೋರಾಂನಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಬರ್ಮಾ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಬರ್ಮಾದಿಂದ ಅಕ್ರಮವಾಗಿ ಅಡಿಕೆಯನ್ನು ಭಾರತಕ್ಕೆ ಸಾಗಿಸಲಾಗುತ್ತಿತ್ತು.
ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿಗಳು ಮತ್ತು ಗಡಿ ಕಸ್ಟಮ್ಸ್ ಇಲಾಖೆಯು ಮಿಜೋರಾಂನ ಮೆಲ್‌ಬುಕ್ ಬಳಿ ಭಾರತ-ಮ್ಯಾನ್ಮಾರ್ ಅಂತರಾಷ್ಟ್ರೀಯ ಗಡಿಯಲ್ಲಿ ಜಂಟಿ ಕಾರ್ಯಾಚರಣೆಯನ್ನು ನಡೆಸಿತ್ತು. ಕಾರ್ಯಾಚರಣೆ ವೇಳೆ ಸುಮಾರು 780 ಚೀಲ ಬರ್ಮಾ ಅಡಿಕೆ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಡಿಕೆಯನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು 3.51 ಕೋಟಿ ರೂಪಾಯಿ.
ಕಳೆದ ಡಿಸೆಂಬರ್‌ನಲ್ಲಿ ಅಸ್ಸಾಂ ಪೊಲೀಸರು ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದರು. ಮಿಜೋರಾಂನಿಂದ ಅಕ್ರಮವಾಗಿ ಸಾಗಿಸಲಾಗಿದ್ದ ಅಡಿಕೆಯನ್ನು ಕ್ಯಾಚಾರ್ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದರು. ಅಂದು ತೈಲ ಟ್ಯಾಂಕರ್‌ನಲ್ಲಿ ಬಚ್ಚಿಟ್ಟಿದ್ದ 2000 ಕಿಲೋಗ್ರಾಂಗಳಷ್ಟು ಬರ್ಮಾ ಅಡಿಕೆಗಳನ್ನು ವಶಪಡಿಸಿಕೊಂಡಿದ್ದರು. ಈ ಜಾಲದ ಹಿಂದೆ ಪ್ರಭಾವಿ ವ್ಯಕ್ತಿಗಳೂ ಇದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ಇದಾದ ಬಳಿಕ ನಾಗ್ಪುರ ನಿವಾಸಿಯನ್ನು ಅಂದು ಬಂಧಿಸಲಾಗಿತ್ತು. ಆತ ಬರ್ಮಾದಿಂದ ಅಕ್ರಮವಾಗಿ ಅಡಿಕೆಯನ್ನು ಕಳ್ಳಸಾಗಣೆ ಮಾಡಿ ವಿವಿಧ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದರು. ಇದೀಗ ಈ ಪ್ರಕರಣದ ಬಗ್ಗೆಯೂ ತನಿಖೆ ನಡೆಸುತ್ತಿದ್ದು, ಅಡಿಕೆ ಕಳ್ಳಸಾಗಾಣಿಗೆಯ ಜಾಲವನ್ನು ಪತ್ತೆ ಮಾಡುತ್ತಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…