ಮಣಿಪುರದ ನೋನಿ ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಅಡಿಕೆ (Arecanut) ಸಾಗಾಟವನ್ನು ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ. ಗುಪ್ತಚರ ಮಾಹಿತಿ ಆಧರಿಸಿ ನಡೆಸಿದ ದಾಳಿಯಲ್ಲಿ ಈ ಅಕ್ರಮ ಸಾಗಾಟ ಪತ್ತೆಯಾಗಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾರ್ಯಾಚರಣೆಯ ವೇಳೆ ಸುಮಾರು 56 ಮೆಟ್ರಿಕ್ ಟನ್ (56,000 ಕೆಜಿ) ಅಡಿಕೆ ವಶಕ್ಕೆ ಪಡೆಯಲಾಗಿದೆ. 100 ಕೆಜಿ ತೂಕದ 560 ಚೀಲಗಳು ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹1.7 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಅಡಿಕೆಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನೋನಿ ಜಿಲ್ಲೆಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದ್ದು ತನಿಖೆ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement



