Arecanut | ಮತ್ತೆ 1,700 ಚೀಲ ಬರ್ಮಾ ಅಡಿಕೆ ವಶಕ್ಕೆ | ಅಕ್ರಮ ಸಾಗಾಣಿಕೆಗೆ ನಿರಂತರ ತಡೆ |

September 8, 2023
9:01 PM
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರ್ಮಾ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಹಾಗೂ 7 ಲಾರಿಗಳ ಸಹಿತ ವಶಕ್ಕೆ ಪಡೆದಿದ್ದಾರೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಮತ್ತೆ ಬೃಹತ್‌ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ  1,700 ಚೀಲ ಅಡಿಕೆ ಸಹಿತ  7 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಟ್ಟೆಚ್ಚರ ವಹಿಸುತ್ತಿದ್ದರೂ ವಿವಿಧ ದಾರಿಗಳ ಮೂಲಕ ನಿರಂತರವಾಗಿ ಅಡಿಕೆ ಸಾಗಾಟ ನಡೆಸಲಾಗುತ್ತಿದೆ. ಹೀಗಾಗಿ ಮತ್ತೆ ಬಿಗುವಿನ ತಪಾಸಣೆಯನ್ನು ಗಡಿ ಭದ್ರತಾ ಪಡೆ ನಡೆಸುತ್ತಿದೆ. ಗುಪ್ತಚರ ಮಾಹಿತಿ ಮೇರೆಗೆ ಮತ್ತೆ ದಾಳಿ ನಡೆಸಿದ ಅಸ್ಸಾಂ ರೈಫಲ್ಸ್‌ನ  ತಂಡವು ಕಾರ್ಯಾಚರಣೆ ನಡೆಸಿತ್ತು. ಇದೀಗ ಅಡಿಕೆ ಅಕ್ರಮವಾಗಿ ಸಾಗಾಟ ಮಾಡುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಈ ಪ್ರದೇಶಗಳಲ್ಲಿ ಬಿಗುವಿನ ಕಾರ್ಯಾಚರಣೆ ಆರಂಭಿಸಿದೆ. ಹೀಗಾಗಿ ಕಳೆದ ಒಂದು ವಾರಗಳಲ್ಲಿ ವ್ಯಾಪಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.

ಕಾರ್ಯಾಚರಣೆಯು ಮಣಿಪುರದ ಫೈಕೊಹ್ ಗ್ರಾಮದ ಸಾಮಾನ್ಯ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಅಡಿಕೆಯನ್ನು ತಡೆಹಿಡಿಯಲಾಗಿದೆ. ವಶಪಡಿಸಿಕೊಂಡ ಅಡಿಕೆ ಚೀಲ, ಬಂಧಿತ ವ್ಯಕ್ತಿಗಳು ಮತ್ತು ಕಳ್ಳಸಾಗಣೆಗೆ ಬಳಸಿದ ಟ್ರಕ್‌ಗಳನ್ನು ಮುಂದಿನ ತನಿಖೆಗೆ ಒಳಪಡಿಸಲಾಗುತ್ತಿದೆ.

@The Assam Rifles X

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror