ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಮತ್ತೆ ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆ ಪತ್ತೆ ಮಾಡಿದೆ.100 ಕೆಜಿಯನ್ನು ಹೊಂದಿರುವ 1,700 ಚೀಲ ಅಡಿಕೆ ಸಹಿತ 7 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳೆದ ಕೆಲವು ದಿನಗಳಿಂದ ಕಟ್ಟೆಚ್ಚರ ವಹಿಸುತ್ತಿದ್ದರೂ ವಿವಿಧ ದಾರಿಗಳ ಮೂಲಕ ನಿರಂತರವಾಗಿ ಅಡಿಕೆ ಸಾಗಾಟ ನಡೆಸಲಾಗುತ್ತಿದೆ. ಹೀಗಾಗಿ ಮತ್ತೆ ಬಿಗುವಿನ ತಪಾಸಣೆಯನ್ನು ಗಡಿ ಭದ್ರತಾ ಪಡೆ ನಡೆಸುತ್ತಿದೆ. ಗುಪ್ತಚರ ಮಾಹಿತಿ ಮೇರೆಗೆ ಮತ್ತೆ ದಾಳಿ ನಡೆಸಿದ ಅಸ್ಸಾಂ ರೈಫಲ್ಸ್‌ನ ತಂಡವು ಕಾರ್ಯಾಚರಣೆ ನಡೆಸಿತ್ತು. ಇದೀಗ ಅಡಿಕೆ ಅಕ್ರಮವಾಗಿ ಸಾಗಾಟ ಮಾಡುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಈ ಪ್ರದೇಶಗಳಲ್ಲಿ ಬಿಗುವಿನ ಕಾರ್ಯಾಚರಣೆ ಆರಂಭಿಸಿದೆ. ಹೀಗಾಗಿ ಕಳೆದ ಒಂದು ವಾರಗಳಲ್ಲಿ ವ್ಯಾಪಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.
ಕಾರ್ಯಾಚರಣೆಯು ಮಣಿಪುರದ ಫೈಕೊಹ್ ಗ್ರಾಮದ ಸಾಮಾನ್ಯ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಅಡಿಕೆಯನ್ನು ತಡೆಹಿಡಿಯಲಾಗಿದೆ. ವಶಪಡಿಸಿಕೊಂಡ ಅಡಿಕೆ ಚೀಲ, ಬಂಧಿತ ವ್ಯಕ್ತಿಗಳು ಮತ್ತು ಕಳ್ಳಸಾಗಣೆಗೆ ಬಳಸಿದ ಟ್ರಕ್‌ಗಳನ್ನು ಮುಂದಿನ ತನಿಖೆಗೆ ಒಳಪಡಿಸಲಾಗುತ್ತಿದೆ.
@The Assam Rifles X
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…