ಅಕ್ರಮ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ

October 21, 2025
8:28 PM

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದ್ದ ಅಡಿಕೆಯನ್ನು ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.  ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಪಡೆ ಒಂದು ಕೋಟಿ ರೂಪಾಯಿ ಮೌಲ್ಯದ 90 ಚೀಲ ಗಸಗಸೆ ಮತ್ತು 120 ಚೀಲ ಅಡಿಕೆ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್ ಮಿಜೋರಾಂನ ಗಡಿ ಚಾಂಫೈ ಜಿಲ್ಲೆಯ ರುವಾಂಟ್ಲಾಂಗ್‌ನ ಫರ್ಲುಯಿ ರಸ್ತೆ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ.

ಅಡಿಕೆಯನ್ನು ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದು, ಭಾರತದ ಇತರ ರಾಜ್ಯಗಳಿಗೆ ಸಾಗಿಸಲು ಉದ್ದೇಶಿಸಲಾಗಿದೆ  ಎಂದು ತನಿಖೆಯ ವೇಳೆ ಬೆಳೆಕಿಗೆ ಬಂದಿದೆ. ಮ್ಯಾನ್ಮಾರ್‌ನಿಂದ “ಬರ್ಮಾ ಅಡಿಕೆ” ಎಂದು ಕರೆಯಲ್ಪಡುವ ಅಡಿಕೆ ಕಳ್ಳಸಾಗಣೆಯು ಈಶಾನ್ಯ ರಾಜ್ಯಗಳ ಸ್ಥಳೀಯ ರೈತರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಇದರ ಜೊತೆಗೇ ದೇಶದ ಇತರಡೆಯ ಅಡಿಕೆ ಬೆಳೆಗಾರರ ಮೇಲೂ ಪರಿಣಾಮ ಬೀರುತ್ತಿದೆ. ತ್ರಿಪುರಾ ಮತ್ತು ಅಸ್ಸಾಂನಲ್ಲಿ ಅಡಿಕೆ ಬೆಳೆಗಾರರು ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror