ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದ್ದ ಅಡಿಕೆಯನ್ನು ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಪಡೆ ಒಂದು ಕೋಟಿ ರೂಪಾಯಿ ಮೌಲ್ಯದ 90 ಚೀಲ ಗಸಗಸೆ ಮತ್ತು 120 ಚೀಲ ಅಡಿಕೆ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್ ಮಿಜೋರಾಂನ ಗಡಿ ಚಾಂಫೈ ಜಿಲ್ಲೆಯ ರುವಾಂಟ್ಲಾಂಗ್‌ನ ಫರ್ಲುಯಿ ರಸ್ತೆ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ಅಡಿಕೆಯನ್ನು ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದು, ಭಾರತದ ಇತರ ರಾಜ್ಯಗಳಿಗೆ ಸಾಗಿಸಲು ಉದ್ದೇಶಿಸಲಾಗಿದೆ ಎಂದು ತನಿಖೆಯ ವೇಳೆ ಬೆಳೆಕಿಗೆ ಬಂದಿದೆ. ಮ್ಯಾನ್ಮಾರ್‌ನಿಂದ “ಬರ್ಮಾ ಅಡಿಕೆ” ಎಂದು ಕರೆಯಲ್ಪಡುವ ಅಡಿಕೆ ಕಳ್ಳಸಾಗಣೆಯು ಈಶಾನ್ಯ ರಾಜ್ಯಗಳ ಸ್ಥಳೀಯ ರೈತರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಇದರ ಜೊತೆಗೇ ದೇಶದ ಇತರಡೆಯ ಅಡಿಕೆ ಬೆಳೆಗಾರರ ಮೇಲೂ ಪರಿಣಾಮ ಬೀರುತ್ತಿದೆ. ತ್ರಿಪುರಾ ಮತ್ತು ಅಸ್ಸಾಂನಲ್ಲಿ ಅಡಿಕೆ ಬೆಳೆಗಾರರು ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…