ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…