Advertisement
ಸುದ್ದಿಗಳು

#Arecanut | ಮಣಿಪುರದಲ್ಲಿ ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | 10.84 ಕೋಟಿ ರೂಪಾಯಿ ಮೌಲ್ಯದ 958 ಚೀಲ ಅಡಿಕೆ ವಶ |

Share

ಮ್ಯಾನ್ಮಾರ್‌ನಿಂದ ಅಕ್ರಮವಾಗಿ  ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್‌ ಪತ್ತೆ ಮಾಡಿದೆ. 10.84 ಕೋಟಿ ಮೌಲ್ಯದ 958 ಚೀಲಗಳ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಕಳೆದ ಕೆಲವು ಸಮಯಗಳಿಂದ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಮ್ಯಾನ್ಮಾರ್‌ ಅಡಿಕೆಯನ್ನು ಮಣಿಪುರ, ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಇದೀಗ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಸ್ಸಾಂ ರೈಫಲ್ಸ್‌ ಪಡೆ  ಕಾಮ್‌ಜಾಂಗ್ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಅಂತರಾಷ್ಟ್ರೀಯ ಗಡಿಯ  ಪ್ರದೇಶದಲ್ಲಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾಗ ಸುಮಾರು 17 ವಾಹನಗಳಲ್ಲಿ ಪತ್ತೆಯಾಗಿತ್ತು. ಮಣಿಪುರ ಮತ್ತು ಮ್ಯಾನ್ಮಾರ್ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ಟ್ರಕ್‌ಗಳ ಮೂಲಕ ಸಾಗಾಟ ಮಾಡಲಾಗುತ್ತಿತ್ತು.ಅಕ್ರಮ ವ್ಯಾಪಾರಕ್ಕೆ ಸಂಬಂಧಿಸಿದಂತೆ  ಹಲವರನ್ನು ಬಂಧಿಸಿದೆ.

ಈ ವರ್ಷದ ಆಗಸ್ಟ್‌ನಲ್ಲಿ, ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಸುಮಾರು 4.84 ಕೋಟಿ ರೂ.ಗೂ ಹೆಚ್ಚು  ಬರ್ಮಾ ಅಡಿಕೆಗಳನ್ನು ವಶಪಡಿಸಿಕೊಂಡಿದ್ದರು. ಕಳ್ಳಸಾಗಣೆ ಮಾಡಲಾದ ಅಡಿಕೆಗಳನ್ನು ಮೊದಲು ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ಟ್ರಕ್‌ಗಳಲ್ಲಿ ತರಲಾಗುತ್ತದೆ. ನಂತರ ನಾಗಾಲ್ಯಾಂಡ್‌ನ ದಿಮಾಪುರ್ ಅಥವಾ ಅಸ್ಸಾಂಗೆ ಸಾಗಿಸಲಾಗುತ್ತದೆ. ಬಳಿಕ ದೇಶದ ಇತರ ಭಾಗಗಳಿಗೆ ರವಾನೆಯಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

3 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago