ಚುನಾವಣಾ ಅಖಾಡದಲ್ಲಿ ಅಪ್ಪ-ಮಕ್ಕಳು : ಗೆಲುವು ಯಾರಿಗೆ? ಸೋಲು ಯಾರಿಗೆ?

May 13, 2023
6:57 PM

ಈ ಬಾರಿ ವಿಧಾನಸಭೆ ಚುನಾವಣೆ ಹತ್ತು ಹಲವು ವಿಶೇಷಗಳಿಂದ ಕೂಡಿತ್ತು. ಕುಟುಂಬ ರಾಜಕಾರಣದ ಬಗ್ಗೆ ಬಹುತೇಕ ಪಕ್ಷಗಳು ಭಾಷಣ ಮಾಡಿದ್ದರೂ, ಗೆಲ್ಲುವ ಹಿತದೃಷ್ಟಿಯಿಂದ ಒಂದೇ ಕುಟುಂಬಕ್ಕೆ ಟಿಕೆಟ್ ನೀಡಿದ ಉದಾಹರಣೆಗಳು ಇವೆ. ಅದರಲ್ಲೂ ತಂದೆ ಮಗ ಅಥವಾ ತಂದೆ ಮಗಳಿಗೆ ಟಿಕೆಟ್ ನೀಡುವ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದವು ಆಯಾ ಪಕ್ಷಗಳು. ಈ ಬಾರಿ ಯಾವ ಕ್ಷೇತ್ರದಲ್ಲಿ ಯಾರೆಲ್ಲ ಅಪ್ಪ ಮಕ್ಕಳು ಅಭ್ಯರ್ಥಿಯಾಗಿದ್ದರು? ಯಾರು ಸೋತಿದ್ದಾರೆ, ಯಾರು ಗೆದ್ದಿದ್ದಾರೆ ಎನ್ನುವ ಲೆಕ್ಕಾಚಾರ ಇಲ್ಲಿದೆ.

Advertisement
Advertisement

ಅರಕಲಗೂಡಿನಲ್ಲಿ ಜೆಡಿಎಸ್‌ ನಿಂದ ಎ. ಮಂಜು ಜಯಗಳಿಸಿದ್ದರೆ, ಬಿಜೆಪಿಯ ಭದ್ರ ಕೋಟೆ ಎನಿಸಿದ್ದ ಮಡಿಕೇರಿಯಲ್ಲಿ ಅವರ ಮಗ ಕಾಂಗ್ರೆಸ್ ನಿಂದ ಡಾ. ಮಂಥರ್ ಗೌಡ ಜಯಗಳಿಸಿದ್ದಾರೆ. ಇಬ್ಬರೂ ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವುದು ವಿಶೇಷ.  ಜೆಡಿಎಸ್‌ ರಾಜಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಚನ್ನಪಟ್ಟಣದಲ್ಲಿ ಅತ್ಯಲ್ಪ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರೆ, ಮಗ ನಿಖಿಲ್ ಕುಮಾರ ಸ್ವಾಮಿ ಭಾರೀ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಎದುರು ಸೋಲು ಕಂಡಿದ್ದಾರೆ.

Advertisement

ಈ ಹಿಂದೆ ಜೆಡಿಎಸ್‌ ರಾಜಾಧ್ಯಕ್ಷರಾಗಿದ್ದ ಹಾಗೂ ಹಾಲಿ ಶಾಸಕ ಜಿ.ಟಿ. ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಜಯಗಳಿಸಿದರೆ, ಅವರ ಮಗ ಜಿ. ಡಿ. ಹರೀಶ್ ಗೌಡ ಅವರು ಜೆಡಿಎಸ್ ನಿಂದ ಹುಣಸೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.  ಬೆಂಗಳೂರಿನ ವಿಜಯನಗರ ಕ್ಷೇತ್ರದಿಂದ ಎಂ. ಕೃಷ್ಣ ಅವರು ಕಾಂಗ್ರೆಸ್‌ ನಿಂದ ಮತ್ತು ಅವರ ಮಗ ಪ್ರಿಯಾ ಕೃಷ್ಣ ಅವರು ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು ಇಬ್ಬರೂ  ಜಯ ಸಾಧಿಸಿದ್ದಾರೆ.

Advertisement

ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅತೀ ಹಿರಿಯ ಸ್ಪರ್ಧಿ  91 ವರ್ಷದ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮತ್ತು ದಾವಣಗೆರೆ ಉತ್ತರ ಕ್ಷೇತ್ರದಿಂದ ಅವರ ಮಗ ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ಜಯಗಳಿಸಿದ್ದಾರೆ. ಇಬ್ಬರೂ ಕೂಡ ಕಾಂಗ್ರೆಸ್‌ ನಿಂದ ಗೆಲುವು ಸಾಧಿಸಿದ್ದಾರೆ.

Advertisement

ಬೆಂಗಳೂರಿನ ಬಿಟಿಎಂ ಲೇಔಟ್‌ ನಿಂದ ರಾಮಲಿಂಗ ರೆಡ್ಡಿ ಅವರು ಕಾಂಗ್ರೆಸ್‌ ನಿಂದ ಜಯಗಳಿಸಿದ್ದರೆ ಅವರ ಮಗಳು ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್‌ ನಿಂದ ಅತ್ಯಲ್ಪ ಅಂದರೆ 160 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ದೇವನಹಳ್ಳಿ ಕ್ಷೇತ್ರದಿಂದ ಮುನಿಯಪ್ಪ ಗೆಲುವಿನ ನಗೆ ಬೀರಿದಿದ್ದಾರೆ. ಅವರ ಪುತ್ರಿ ರೂಪಾ ಶಶಿಧರ್ ಕೆಜಿಎಫ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror