ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ ಮತ್ತು ನೆರವು ಒದಗಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಬಿಜಾಪುರ ತೋಟಗಾರಿಕೆ ರೈತರ ಉತ್ಪಾದಕರ ಕಂಪನಿ ನಿಯಮಿತ ವತಿಯಿಂದ ಆಯೋಜಿಸಲಾದ ರೈತ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಆಹಾರ ಸಂಸ್ಕರಣಾ ಘಟಕಗಳಿಂದ ರೈತರಿಗೆ ಹೆಚ್ಚಿನ ಲಾಭ ಸಿಗುತ್ತದೆ. ಉದ್ಯೋಗವೂ ಸೃಷ್ಟಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂತಹ ಎಫ್.ಪಿ.ಓ ಗಳ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಸಕಲ ನೆರವು ಒದಗಿಸಲಾಗುವುದು ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel