(ಸಾಂದರ್ಭಿಕ ಚಿತ್ರ ಕೃಪೆ-ನೆಟ್ )
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕಡಿಮೆ ಪ್ರಮಾಣದಲ್ಲಿ ಆಗಿರುವುದರಿಂದ ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಅವಶ್ಯವಿರುವ ಮೇವು ಬೆಳೆಯಲು ನೀರಾವರಿ ಸೌಲಭ್ಯ ಹೊಂದಿರುವ ರೈತರ ಜಮೀನಿನಲ್ಲಿ ಮೇವನ್ನು ಬೆಳೆದು ಅವಶ್ಯವಿರುವ ರೈತರಿಗೆ ಮಾರಾಟ ಮಾಡಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪ್ರೋತ್ಸಾಹಿಸಲಾಗುತ್ತದೆ. ಆಸಕ್ತ ರೈತರು ನೀರಾವರಿ ಸೌಲಭ್ಯ ಹೊಂದಿರುವ ಜಮೀನಿನ ಆರ್.ಟಿ.ಸಿ ಪ್ರತಿ ಮತ್ತು ಆಧಾರ ಪ್ರತಿಯೊಂದಿಗೆ ಇದೇ ಡಿಸೆಂಬರ್ 15 ರೊಳಗೆ ಸಮೀಪದ ಪಶುವೈದ್ಯರಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…