ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ಚುರುಕಾಗಿಸಿವೆ. ತಮ್ಮ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಪುಂಖಾನು ಪುಂಖವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್‌ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
12 ಭರವಸೆ?
1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ
2. ಕನ್ನಡವೇ ಮೊದಲು
3. ರೈತ ಚೈತನ್ಯ
4. ಹಿರಿಯ ನಾಗರಿಕರಿಗೆ ಸನ್ಮಾನ
5. ಶಿಕ್ಷಣವೇ ಆಧುನಿಕ ಶಕ್ತಿ
6. ಆರೋಗ್ಯ ಸಂಪತ್ತು
7. ವಿಕಲಚೇತನರಿಗೆ ಆಸರೆ
8. ಆರಕ್ಷಕರಿಗೆ ಅಭಯ
9. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ
10. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ
11.ಯುವಜನ ಸಬಲೀಕರಣ
12. ವೃತ್ತಿನಿರತ ವಕೀಲರ ಅಭ್ಯುದಯ
ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಣಾಳಿಕೆಯನ್ನು ದೇವರ ಮುಂದಿಟ್ಟು ಚನ್ನಮ್ಮ, ಕುಮಾರಸ್ವಾಮಿ ಪೂಜೆ ನೆರವೇರಿಸಿದರು. ಈವೇಳೆ ದೇವೇಗೌಡ ಕುಟುಂಬ, ಸಿಎಂ ಇಬ್ರಾಹಿಂ ಉಪಸ್ಥಿತರಿದ್ದರು.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…