ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ

August 17, 2025
6:52 AM

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು  ಭಾರತಕ್ಕೆ ಮರಳಲಿದ್ದಾರೆ. 18 ದಿನಗಳ ಕಾಲ  ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಯಶಸ್ವಿಯಾಗಿ ಕಳೆದು, ಮರಳಿ ಭೂಮಿಗೆ ಬಂದಿದ್ದ ಶುಭಾಂಶು ಶುಕ್ಲಾ, ಅಮೆರಿಕಾದ ಪುನರ್ ವಸತಿ ಕೇಂದ್ರದಲ್ಲಿದ್ದರು. ಭೂಮಿಯ ವಾತಾವರಣಕ್ಕೆ ಸಂಪೂರ್ಣ ಹೊಂದಿಕೊಂಡ ಹಿನ್ನೆಲೆಯಲ್ಲಿ  ಅವರು  ಭಾರತಕ್ಕೆ ಭೇಟಿ ನೀಡಲಿದ್ದಾರೆ.  ಈ ಕುರಿತು  ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕವಾಗಿ ಮಾಹಿತಿ ಹಂಚಿಕೊಂಡಿರುವ ಶುಭಾಂಶು ಶುಕ್ಲಾ, ಕುಟುಂಬದ ಸದಸ್ಯರು, ಸ್ನೇಹಿತರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಗಗನಯಾನ ಮಿಷನ್  ಭಾಗವಾಗಿದ್ದ ಸ್ನೇಹಿತರನ್ನು ಬಿಟ್ಟು ವಾಪಸ್ಸಾಗುತ್ತಿರುವುದು ಹೃದಯ ಭಾರವಾಗಿದೆ ಎಂದು ತಿಳಿಸಿದ್ದಾರೆ. 2027ರಲ್ಲಿ ಇಸ್ರೋ ಕೈಗೊಳ್ಳಲು ಉದ್ದೇಶಿಸಿರುವ ಮಾನವ ಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ನಾಸಾ ಜತೆಗೂಡಿ ನಡೆಸಿದ ಮಾನವ ಸಹಿತ ಬಾಹ್ಯಾಕಾಶ ಯಾನದಲ್ಲಿ ಶುಭಾಂಶು ಶುಕ್ಲ ಅವರು ಇತರ ಮೂವರು ಗಗನಯಾನಿಗಳೊಂದಿಗೆ ಪಾಲ್ಗೊಂಡಿದ್ದರು. ಕಳೆದ ಒಂದು ವರ್ಷದಿಂದ ಶುಭಾಂಶು ಅವರು ಅಮೆರಿಕದಲ್ಲಿದ್ದು ಆಕ್ಸಿಯಂ-4 ಯೋಜನೆಯ ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror