ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

July 15, 2025
9:39 PM

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ ಡ್ರ್ಯಾಗನ್ ಬಾಹ್ಯಾಕಾಶ ನೌಕೆ   ಭಾರತೀಯ ಕಾಲಮಾನದ ಪ್ರಕಾರ  ಅಪರಾಹ್ನ 3 ಗಂಟೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಸಮೀಪದ ಪೆಸಿಫಿಕ್  ಮಹಾಸಾಗರಕ್ಕೆ ಸುರಕ್ಷಿತವಾಗಿ ಬಂದಿಳಿಯಿತು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 18 ದಿನಗಳನ್ನು ಕಳೆದ ನಂತರ ಭೂಮಿಗೆ ಮರಳಿದ  ಗಗನಯಾತ್ರಿಗಳನ್ನು ಬಾಹ್ಯಾಕಾಶ ನೌಕೆಯಿಂದ ಸುರಕ್ಷಿತವಾಗಿ ಹೊರತರಲಾಗಿದ್ದು, ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅವರನ್ನು 7 ದಿನಗಳ ಪುನರ್ವಸತಿಗೆ ಕಳುಹಿಸಲಾಯಿತು. ಈ ವೇಳೆ ಭಾರತದ ಶುಭಾಂಶು ಶುಕ್ಲಾ ತಮ್ಮ ಬಾಹ್ಯಾಕಾಶ ಉಡುಪಿನ ಮೇಲೆ ತ್ರಿವರ್ಣ ಧ್ವಜವನ್ನು ಧರಿಸಿದ್ದುದು ವಿಶೇಷವಾಗಿತ್ತು. ನಿನ್ನೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ್ದ ಗಗನಯಾತ್ರಿಗಳು ಸುಮಾರು 23 ಗಂಟೆಗಳ ಬಳಿಕ ಭೂಮಿಗೆ ತಲುಪಿದ್ದಾರೆ. ಶುಭಾಂಶು ಶುಕ್ಲಾ , ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮಿಷನ್ ಅನ್ನು ಆಕಾಶಗಂಗಾ ಎಂದು ಹೆಸರಿಸಲಾಗಿದ್ದು, ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ , ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹಾಗೂ ಆಕ್ಸಿಯಮ್ ಸ್ಪೇಸ್ ಸಂಸ್ಥೆಯ ಸಹಯೋಗದಲ್ಲಿ ಕೈಗೊಳ್ಳಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror