ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

July 14, 2025
11:16 PM

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಒಳಗೊಂಡ ಅಕ್ಸಿಯಂ-4 ಮಿಷನ್‌ ಕೆ ಭೂಮಿಗೆ  ಮರು ಯಾನ  ಆರಂಭಿಸಲಿದೆ. ಈ ಕುರಿತು ನಾಸಾ ಮಾಹಿತಿ ನೀಡಿದ್ದು, ಶುಭಾಂಶು ಶುಕ್ಲಾ  ಹಾಗೂ  ಉಳಿದ ಮೂವರು ಗಗನಯಾತ್ರಿಗಳು, ಸ್ಪೇಸ್ ಸೂಟ್ ಧರಿಸಿ, ಗಗನನೌಕೆಯನ್ನು ಏರಿದ್ದು, ಪ್ರಕ್ರಿಯೆ ಆರಂಭವಾಗಿದೆ.

ನಿಗದಿತ ಕಕ್ಷೆಯಲ್ಲಿ ಹಲವು ಸುತ್ತು ಹಾಕಿದ ನಂತರ ಭೂಮಿಯತ್ತ ಪ್ರಯಾಣ ಆರಂಭಿಸಲಿರುವ ಡ್ರ್ಯಾಗನ್ ನೌಕೆ  ನಾಳೆ ಮಧ್ಯಾಹ್ನ 3 ಗಂಟೆಯ ವೇಳೆಗೆ ಕ್ಯಾಲಿಫೋರ್ನಿಯಾದ  ಕಡಲ ತೀರಕ್ಕೆ ಬಂದಿಳಿಯಲಿದೆ. ಗ್ರೂಪ್ ಕ್ಯಾಪ್ಟನ್ ಶುಕ್ಲಾ 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಾರ್ಯನಿರ್ವಹಿಸಿದ್ದು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಥಮ ಭಾರತೀಯರಾಗಿದ್ದಾರೆ. ಭೂಮಿಗೆ ಮರುಪಯಣ ಆರಂಭಿಸುವ ಮುನ್ನ ಶುಭಾಂಶು ಶುಕ್ಲಾ ಸಂದೇಶ ರವಾನಿಸಿದ್ದು, ಇಂದಿನ ಭಾರತ ಬಾಹ್ಯಾಕಾಶ ವಲಯದಲ್ಲಿ ಮಹತ್ವಾಕಾಂಕ್ಷಿಯಾಗಿದೆ. ಇಂದಿನ ಭಾರತ ಹೆಚ್ಚು ಆತ್ಮವಿಶ್ವಾಸ ಹೊಂದಿದೆ, ಹೆಮ್ಮೆಯಿಂದ ಕೂಡಿದೆ. ಈ ಎಲ್ಲಾ ಕಾರಣಗಳಿಂದ ಮತ್ತೊಮ್ಮೆ ಭಾರತ “ಸಾರೇ ಜಹಾಸೇ ಅಚ್ಛಾ” ಎಂದು ಹೇಳಲು ಬಯಸುವುದಾಗಿ ತಿಳಿಸಿದ್ದಾರೆ.  1984ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ತೆರಳಿದ ಎರಡನೇ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಈ ಯಾನ ಭಾರತದ ಮಾನವ ಬಾಹ್ಯಾಕಾಶ ಯಾನ ’ಗಗನ್‌ಯಾನ’ ಯೋಜನೆಗೆ ಮೊದಲ ಪ್ರಮುಖ ಹಾಗೂ ದೃಢ ಹೆಜ್ಜೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror