ರೋಹ್ಟಂಗ್‌ ನಲ್ಲಿ ವಿಶ್ವದ ಅತಿ ಉದ್ದವಾದ ಅಟಲ್‌ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

October 3, 2020
10:16 AM

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿಮಾಚಲಪ್ರದೇಶದ ರೋಹ್ಟಂಗ್​ನಲ್ಲಿ ನಿರ್ಮಾಣವಾಗಿರುವ ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟನೆ ಮಾಡಲಿದ್ದಾರೆ.

ಇದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಯೋಜನೆಯಾಗಿತ್ತು. 2002ರಲ್ಲಿ ಈ ಸುರಂಗ ಮಾರ್ಗದ ನಿರ್ಮಾಣಕಾರ್ಯವನ್ನು ಆರಂಭಿಸಲಾಗಿತ್ತು. ಈ ಯೋಜನೆ ಪೂರ್ಣಗೊಂಡಿದ್ದು, ಇಂದು (ಅ.3) ಪ್ರಧಾನಿ ಮೋದಿ ವಿಶ್ವದ ಅತಿ ಉದ್ದವಾದ ಸುರಂಗಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದ ಸಮಯವೂ ಉಳಿತಾಯವಾಗಲಿದೆ.

ಈ ಸುರಂಗಮಾರ್ಗವು 10.5 ಮೀಟರ್ ಅಗಲದಲ್ಲಿದೆ. ಪ್ರತಿ 250 ಮೀಟರ್​ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರತಿ ಅರ್ಧ ಕಿ.ಮೀ.ಗೆ ತುರ್ತು ನಿರ್ಗಮನ ವ್ಯವಸ್ಥೆ ಇರಲಿದೆ. ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಒಟ್ಟು 3,500 ಕೋಟಿ ರೂ. ಖರ್ಚು ಮಾಡಲಾಗಿದೆ. ಒಂದು ದಿನಕ್ಕೆ ಇದರಲ್ಲಿ 1,500 ಟ್ರಕ್​ಗಳು ಮತ್ತು ಸುಮಾರು 3 ಸಾವಿರ ಕಾರುಗಳು ಸಂಚರಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror