ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿ ನಿರ್ಮಾಣವಾಗಿರುವ ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟನೆ ಮಾಡಲಿದ್ದಾರೆ.
ಇದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಯೋಜನೆಯಾಗಿತ್ತು. 2002ರಲ್ಲಿ ಈ ಸುರಂಗ ಮಾರ್ಗದ ನಿರ್ಮಾಣಕಾರ್ಯವನ್ನು ಆರಂಭಿಸಲಾಗಿತ್ತು. ಈ ಯೋಜನೆ ಪೂರ್ಣಗೊಂಡಿದ್ದು, ಇಂದು (ಅ.3) ಪ್ರಧಾನಿ ಮೋದಿ ವಿಶ್ವದ ಅತಿ ಉದ್ದವಾದ ಸುರಂಗಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದ ಸಮಯವೂ ಉಳಿತಾಯವಾಗಲಿದೆ.
ಈ ಸುರಂಗಮಾರ್ಗವು 10.5 ಮೀಟರ್ ಅಗಲದಲ್ಲಿದೆ. ಪ್ರತಿ 250 ಮೀಟರ್ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರತಿ ಅರ್ಧ ಕಿ.ಮೀ.ಗೆ ತುರ್ತು ನಿರ್ಗಮನ ವ್ಯವಸ್ಥೆ ಇರಲಿದೆ. ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಒಟ್ಟು 3,500 ಕೋಟಿ ರೂ. ಖರ್ಚು ಮಾಡಲಾಗಿದೆ. ಒಂದು ದಿನಕ್ಕೆ ಇದರಲ್ಲಿ 1,500 ಟ್ರಕ್ಗಳು ಮತ್ತು ಸುಮಾರು 3 ಸಾವಿರ ಕಾರುಗಳು ಸಂಚರಿಸಬಹುದು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…