ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ ಘಟನೆಯೊಂದು ನಿನ್ನೆ ರಾತ್ರಿ ಸುಮಾರು 11.30 ಗಂಟೆಗೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.
ರಾತ್ರಿ ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ್ ನಿಂದ ದಾಳಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಹರೀಶ್ ಪೂಂಜಾ ತಮ್ಮ ಗೆಳೆಯರ ಕಾರಿನಲ್ಲಿ ಮುಂದೆ ಹೋಗುತ್ತಿದ್ದರೆ, ಈ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದದಿಂದ ನಿಂದಿಸಿ, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel