ಚುನಾವಣೆಯ ಭದ್ರತೆ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನ | ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |

April 17, 2024
10:47 AM
ಭಾರತ-ಬಾಂಗ್ಲಾದೇಶ  ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್‌ಎಫ್‌  ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ.

ಚುನಾವಣೆಯ ಗಡಿ ಭದ್ರತೆಯ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನಕ್ಕೆ ತಡೆಯಾಗಿದೆ.  ಭಾರತ-ಬಾಂಗ್ಲಾದೇಶ  ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್‌ಎಫ್‌  ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ. ಅಂತರಾಷ್ಟ್ರೀಯ ಗಡಿಯಲ್ಲಿ ಸುಮಾರು 4,900 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ,ಬಿಎಸ್‌ಎಫ್‌ ಹಾಗೂ ಮೇಘಾಲಯ ಪೊಲೀಸರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಗಡಿಯ ಸಮೀಪದಲ್ಲಿರುವ  ಮನೆಯಿಂದ  ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಂಗ್ಲಾದೇಶದಿಂದ ಅಡಿಕೆ ಕಳ್ಳಸಾಗಾಣಿಕೆಯಾಗಿ ಭಾರತದ ಗಡಿಭಾಗದಲ್ಲಿ ಮನೆಗಳಲ್ಲಿ ದಾಸ್ತಾನು ಮಾಡಿ ಅಲ್ಲಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿರುವುದರ ಬಗ್ಗೆ ಗಡಿ ಭದ್ರತಾ ಸಿಬಂದಿಗಳ ಕಣ್ಗಾವಲು ಇರಿಸಿದ್ದಾರೆ. ಚುನಾವಣೆ ಸಮಯದಲ್ಲೂ ಅಕ್ರಮ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿದೆ. ಇದೀಗ ಇಂತಹ ಅಕ್ರಮಗಳ ವಿರುದ್ಧ ತಡೆಗೆ ಪೊಲೀಸರು ಹಾಗೂ ಗಡಿಭದ್ರತಾ ತಂಡವು ಕೆಲಸ ಮಾಡಿದೆ.

ಇದೇ ವೇಳೆ ಅಸ್ಸಾಂ ರಾಜ್ಯದ ಕಾಮ್‌ಜಾಂಗ್ ಜಿಲ್ಲೆಯ ಸಾಮಾನ್ಯ ಪ್ರದೇಶದಲ್ಲಿ ಕಾಂಗ್‌ಪತ್ ಸೆಂಟರ್‌ನಲ್ಲಿ ಅಸ್ಸಾಂ ರೈಫಲ್ಸ್‌ನ  ಪಡೆಗಳು ಅಗತ್ಯ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳ ಸಹಿತ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.  ಸುಮಾರು 186 ಚೀಲ ಅಡಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Source: News Post

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror