ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

April 8, 2026
10:24 PM
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೂರೈಕೆ ಹೆಚ್ಚಿಸಲಾಗಿದ್ದು, ಚಾಲಕರು ಆತಂಕಪಡಬಾರದು ಎಂದು ಮನವಿ ಮಾಡಿದೆ.

ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‍ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‍ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟಪಡಿಸಿದೆ.
ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಮೂಲಕ ಹೆಚ್ಚಿನ ಪ್ರಮಾಣದ ಅನಿಲವನ್ನು ಪೂರೈಕೆ ಮಾಡಲಾಗುತ್ತಿದೆ.
ಹಿಂದೆ ಈ ಮೂರು ಸಂಸ್ಥೆಗಳು ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಅನ್ನು ಸರಬರಾಜು ಮಾಡುತ್ತಿದ್ದವು. ಆದರೆ ಪ್ರಸ್ತುತ ಬೇಡಿಕೆಯನ್ನು ಪೂರೈಸಲು ಸರಬರಾಜು ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸದ್ಯ ಪ್ರತಿದಿನ ಸರಾಸರಿ 83.58 ಮೆಟ್ರಿಕ್ ಟನ್ ಗ್ಯಾಸ್ ಅನ್ನು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೂರೈಸಲಾಗುತ್ತಿದೆ.

ಕಳೆದ ಐದು ದಿನಗಳ ಪೂರೈಕೆ ವಿವರ: ಕಳೆದ ಏಪ್ರಿಲ್ 2 ರಿಂದ ಏಪ್ರಿಲ್ 6 ರವರೆಗಿನ ಅಂಕಿಅಂಶಗಳನ್ನು ಗಮನಿಸಿದರೆ, ಪೂರೈಕೆಯಲ್ಲಿ ಸ್ಥಿರತೆ ಇರುವುದು ಕಂಡುಬರುತ್ತದೆ. ಏಪ್ರಿಲ್ 2 ರಂದು 87.78 ಮೆಟ್ರಿಕ್ ಟನ್, ಏಪ್ರಿಲ್ 3 ರಂದು 86.05 ಮೆಟ್ರಿಕ್ ಟನ್, ಏಪ್ರಿಲ್ 4 ರಂದು 84.80 ಮೆಟ್ರಿಕ್ ಟನ್, ಏಪ್ರಿಲ್ 5 ರಂದು ಗರಿಷ್ಠ 94.11 ಮೆಟ್ರಿಕ್ ಟನ್ ಹಾಗೂ ಏಪ್ರಿಲ್ 6 ರಂದು 83.58 ಮೆಟ್ರಿಕ್ ಟನ್ ಅನಿಲವನ್ನು ಈ ಮೂರು ಪ್ರಮುಖ ಸಂಸ್ಥೆಗಳು ಯಶಸ್ವಿಯಾಗಿ ಪೂರೈಕೆ ಮಾಡಿವೆ.
ಆದ್ದರಿಂದ, ರಾಜ್ಯದ ಆಟೋ ಮಾಲೀಕರು ಮತ್ತು ಚಾಲಕರು ಇಂತಹ ಯಾವುದೇ ಸುಳ್ಳು ವದಂತಿಗಳನ್ನು ನಂಬಬಾರದು ಮತ್ತು ಆತಂಕಕ್ಕೊಳಗಾಗಿ ಬಂಕ್‍ಗಳ ಮುಂದೆ ಸಾಲುಗಟ್ಟಿ ನಿಲ್ಲಬಾರದು ಎಂದು ಸರ್ಕಾರ ಮನವಿ ಮಾಡಿದೆ. ಅನಿಲ ಪೂರೈಕೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka government has clarified that there is no major shortage of auto LPG in the state, dismissing recent reports as rumors. While minor shortages were observed in some private suppliers, government oil companies have increased supply significantly. Daily supply has risen from 56.67 MT to 83.58 MT, ensuring stable availability. Authorities have urged auto drivers not to panic or form long queues at gas stations.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!
April 8, 2026
7:47 AM
by: ದ ರೂರಲ್ ಮಿರರ್.ಕಾಂ
ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror