ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

April 19, 2026
7:45 AM
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು 300% ಹೆಚ್ಚಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂಧನ ಲಭ್ಯತೆ ಖಚಿತಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಜಾಗತಿಕ ರಾಜಕೀಯ ಬಿಕ್ಕಟ್ಟಿನ ಪರಿಣಾಮವಾಗಿ ಖಾಸಗಿ ವಲಯದ ಆಟೋ LPG ಪೂರೈಕೆ ಸರಪಳಿಯಲ್ಲಿ ಉಂಟಾದ ವ್ಯತ್ಯಯದಿಂದ ತೀವ್ರ ಬೇಡಿಕೆ ನಿರ್ಮಾಣವಾಗಿದೆ. ಈ ಹಿನ್ನೆಲೆ ಸಾರ್ವಜನಿಕ ವಲಯದ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ (ಇಂಡಿಯನ್ ಆಯಿಲ್) ಪೂರೈಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯ ದಿನಗಳಲ್ಲಿ ಸುಮಾರು 23 ಮೆಟ್ರಿಕ್ ಟನ್ ಆಟೋ LPG ಪೂರೈಕೆ ನಡೆಯುತ್ತಿತ್ತು. ಆದರೆ, ನಿನ್ನೆ ಸಂಸ್ಥೆ ದಾಖಲೆಯ 75.53 ಮೆಟ್ರಿಕ್ ಟನ್ ಅನಿಲವನ್ನು ಪೂರೈಸಿ, ಪೂರೈಕೆಯನ್ನು ಸುಮಾರು 300% ಹೆಚ್ಚಿಸಿದೆ.

ಇದೇ ರೀತಿ ಕರ್ನಾಟಕದಾದ್ಯಂತ ದೈನಂದಿನ ಪೂರೈಕೆಯನ್ನು 43.5 ಮೆಟ್ರಿಕ್ ಟನ್ನಿನಿಂದ 83 ಮೆಟ್ರಿಕ್ ಟನ್ ಗಿಂತಲೂ ಹೆಚ್ಚು ಮಾಡುವ ಮೂಲಕ ಪೂರೈಕೆಯನ್ನು ದ್ವಿಗುಣಗೊಳಿಸಲಾಗಿದೆ.

ರಾಜ್ಯದ ಮಾರುಕಟ್ಟೆಯಲ್ಲಿ ಶೇ. 80 ರಷ್ಟು ಪಾಲನ್ನು ಹೊಂದಿರುವ ಖಾಸಗಿ ವಿತರಣಾ ಕೇಂದ್ರಗಳಲ್ಲಿ ಪೂರೈಕೆ ವ್ಯತ್ಯಯ ಉಂಟಾದದ್ದು ಈ ತೀವ್ರ ಬೇಡಿಕೆಗೆ ಪ್ರಮುಖ ಕಾರಣವಾಗಿದೆ.

ಇಂಡಿಯನ್ ಆಯಿಲ್ ಸಂಸ್ಥೆ ಆಟೋ LPG ಗ್ರಾಹಕರಿಗೆ ಉಂಟಾದ ಅನಾನುಕೂಲತೆಗಳನ್ನು ಗಮನಿಸಿ, ಅವರ ಪರಿಸ್ಥಿತಿಗೆ ಸಹಾನುಭೂತಿ ವ್ಯಕ್ತಪಡಿಸಿದೆ. ಸಾರ್ವಜನಿಕ ವಲಯದ ಸಂಸ್ಥೆಯಾಗಿ ತನ್ನ ಜವಾಬ್ದಾರಿಯನ್ನು ಮನಗಂಡು, ಗರಿಷ್ಠ ಮಟ್ಟದಲ್ಲಿ LPG ಲಭ್ಯತೆ ಖಚಿತಪಡಿಸುವುದಾಗಿ ಸಂಸ್ಥೆ ಭರವಸೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Indian Oil Corporation has increased Auto LPG supply by nearly 300% in Bengaluru in response to disruptions in private supply chains caused by global geopolitical tensions. The move aims to meet rising demand and ensure uninterrupted fuel availability.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror