1175.07 ಲಕ್ಷ ಮೆಟ್ರಿಕ್ ಟನ್ ಗೋಧಿ ಉತ್ಪಾದನೆ ದಾಖಲು | ದೇಶದಲ್ಲಿ ಸಾಕಷ್ಟು ಗೋಧಿ ಲಭ್ಯತೆ | ಗೋಧಿ ದಾಸ್ತಾನು ಮಿತಿ ಪರಿಷ್ಕರಿಸಲು ನಿರ್ಧಾರ

August 28, 2025
11:30 AM

ಮುಂಬರುವ ಹಬ್ಬದ ಋತುವಿಗೆ ಮುಂಚಿತವಾಗಿ ಗೋಧಿ ಬೆಲೆ ನಿಯಂತ್ರಿಸುವ ನಿರಂತರ ಪ್ರಯತ್ನಗಳಲ್ಲಿ, ಕೇಂದ್ರ ಸರ್ಕಾರ 2026 ರ ಮಾರ್ಚ್ 31ರವರೆಗೆ ಅನ್ವಯವಾಗುವಂತೆ ಗೋಧಿ ದಾಸ್ತಾನು ಮಿತಿಗಳನ್ನು ಪರಿಷ್ಕರಿಸಲು ನಿರ್ಧರಿಸಿದೆ.

ಆಹಾರ ಭದ್ರತೆ ನಿರ್ವಹಿಸಲು ಮತ್ತು ಅಕ್ರಮ ದಾಸ್ತಾನು ಮತ್ತು ಊಹಾಪೋಹಗಳನ್ನು ತಡೆಗಟ್ಟಲು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಾರಿಗಳು, ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು ಮತ್ತು ಸಂಸ್ಕರಣಾ ಘಟಕಗಳಿಗೆ ಅನ್ವಯವಾಗುವಂತೆ ಗೋಧಿಯ ದಾಸ್ತಾನು ಮಿತಿಯನ್ನು ವಿಧಿಸಿದೆ.ನಿರ್ದಿಷ್ಟ ಆಹಾರ ಪದಾರ್ಥಗಳ ಮೇಲಿನ ಪರವಾನಗಿ ಅವಶ್ಯಕತೆಗಳು, ದಾಸ್ತಾನು ಮಿತಿ ಮತ್ತು ಸಾಗಣೆ ನಿರ್ಬಂಧಗಳನ್ನು ತೆಗೆದುಹಾಕುವ (ತಿದ್ದುಪಡಿ) ಆದೇಶ, 2025 ಅನ್ನು 2025ರ ಮೇ 27ರಂದು ಹೊರಡಿಸಲಾಗಿತ್ತು. ಇದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯಿಸುತ್ತದೆ.

2024-25ನೇ ಬೆಳೆ ವರ್ಷದಲ್ಲಿ ಒಟ್ಟು 1175.07 ಲಕ್ಷ ಮೆಟ್ರಿಕ್ ಟನ್ ಗೋಧಿ ಉತ್ಪಾದನೆ ದಾಖಲಾಗಿದ್ದು, ದೇಶದಲ್ಲಿ ಸಾಕಷ್ಟು ಗೋಧಿ ಲಭ್ಯತೆ ಇದ್ದು, ಬೆಲೆಗಳನ್ನು ನಿಯಂತ್ರಿಸಲು ಮತ್ತು ದೇಶದಲ್ಲಿ ಸುಲಭ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಗೋಧಿಯ ದಾಸ್ತಾನು ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror