ಮುಂಬರುವ ಹಬ್ಬದ ಋತುವಿಗೆ ಮುಂಚಿತವಾಗಿ ಗೋಧಿ ಬೆಲೆ ನಿಯಂತ್ರಿಸುವ ನಿರಂತರ ಪ್ರಯತ್ನಗಳಲ್ಲಿ, ಕೇಂದ್ರ ಸರ್ಕಾರ 2026 ರ ಮಾರ್ಚ್ 31ರವರೆಗೆ ಅನ್ವಯವಾಗುವಂತೆ ಗೋಧಿ ದಾಸ್ತಾನು ಮಿತಿಗಳನ್ನು ಪರಿಷ್ಕರಿಸಲು ನಿರ್ಧರಿಸಿದೆ.
ಆಹಾರ ಭದ್ರತೆ ನಿರ್ವಹಿಸಲು ಮತ್ತು ಅಕ್ರಮ ದಾಸ್ತಾನು ಮತ್ತು ಊಹಾಪೋಹಗಳನ್ನು ತಡೆಗಟ್ಟಲು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಾರಿಗಳು, ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು ಮತ್ತು ಸಂಸ್ಕರಣಾ ಘಟಕಗಳಿಗೆ ಅನ್ವಯವಾಗುವಂತೆ ಗೋಧಿಯ ದಾಸ್ತಾನು ಮಿತಿಯನ್ನು ವಿಧಿಸಿದೆ.ನಿರ್ದಿಷ್ಟ ಆಹಾರ ಪದಾರ್ಥಗಳ ಮೇಲಿನ ಪರವಾನಗಿ ಅವಶ್ಯಕತೆಗಳು, ದಾಸ್ತಾನು ಮಿತಿ ಮತ್ತು ಸಾಗಣೆ ನಿರ್ಬಂಧಗಳನ್ನು ತೆಗೆದುಹಾಕುವ (ತಿದ್ದುಪಡಿ) ಆದೇಶ, 2025 ಅನ್ನು 2025ರ ಮೇ 27ರಂದು ಹೊರಡಿಸಲಾಗಿತ್ತು. ಇದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯಿಸುತ್ತದೆ.
2024-25ನೇ ಬೆಳೆ ವರ್ಷದಲ್ಲಿ ಒಟ್ಟು 1175.07 ಲಕ್ಷ ಮೆಟ್ರಿಕ್ ಟನ್ ಗೋಧಿ ಉತ್ಪಾದನೆ ದಾಖಲಾಗಿದ್ದು, ದೇಶದಲ್ಲಿ ಸಾಕಷ್ಟು ಗೋಧಿ ಲಭ್ಯತೆ ಇದ್ದು, ಬೆಲೆಗಳನ್ನು ನಿಯಂತ್ರಿಸಲು ಮತ್ತು ದೇಶದಲ್ಲಿ ಸುಲಭ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಗೋಧಿಯ ದಾಸ್ತಾನು ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…