ವಿಶ್ವ ಆಹಾರ ದಿನಾಚರಣೆ ಅಂಗವಾಗಿ ರಾಸಾಯನಿಕ ಮತ್ತು ಔಷಧ ಮುಕ್ತ ಬೆಳೆ ಬೆಳೆಯುವ ಕುರಿತು ರೈತರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕೊಪ್ಪಳ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ತೋಟಗಾರಿಕೆ ಇಲಾಖೆ, ಪಶುಸಂಗೋಪನ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಹಾರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಇದೇ ವೇಳೆ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಮಾತನಾಡಿದ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಸಾವಯವ ಕೃಷಿಗೆ ಸರ್ಕಾರ ಒತ್ತು ನೀಡಿದ್ದು, ರಾಸಾಯನಿಕ ಮತ್ತು ಔಷಧ ಮುಕ್ತ ಬೆಳೆ ಬೆಳೆಯುವ ಕುರಿತು ರೈತರಿಗೆ ಮನವರಿಕೆ ಮಾಡಲು ಕೃಷಿ ಸಖಿಯರನ್ನು ನೇಮಿಸಲಾಗಿದೆ ಎಂದರು.
ಜಿಂಟಿ ಕೃಷಿ ನಿರ್ದೇಶಕ ಟಿ.ಎಸ್ ರುದ್ರೇಶಪ್ಪ ಮಾತನಾಡಿ, ಗುಣಮಟ್ಟದ ಆಹಾರ ಉತ್ಪಾದಿಸುವ ಉದ್ದೇಶದಿಂದ ಸರ್ಕಾರ ನೈಸರ್ಗಿಕ ಕೃಷಿ, ಪಾರಂಪರಿಕ ಕೃಷಿ ವಿಕಾಸ್ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರೈತ ಮಹಿಳೆ ಸೌಮ್ಯಾ, 2 ಎಕರೆಯಲ್ಲಿ ತೋಟಗಾರಿಕೆ, 5 ಎಕರೆಯಲ್ಲಿ ಮಳೆಯಾಶ್ರಿತ ರಾಸಾಯನಿಕ ಮುಕ್ತವಾಗಿ ಬೆಳೆಯುತ್ತಿದ್ದು, ತಾವೇ ಮಾರುಕಟ್ಟೆ ಕಲ್ಪಿಸಿಕೊಂಡಿದ್ದೇವೆ. ತಮ್ಮ ಆಹಾರ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದೆ ಎಂದು ತಿಳಿಸಿದರು.
ಪಶು ಇಲಾಖೆ ಉಪ ನಿರ್ದೇಶಕ ಡಾ.ಪಿ.ಎಂ. ಮಲ್ಲಯ್ಯ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಕೃಷಿ ಉಪ ನಿರ್ದೇಶಕ ಎಲ್.ಸಿದ್ದೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.




