ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮ | ಸಾವಯವ ಕೃಷಿ ಕುರಿತು ಅರಿವು

October 18, 2025
6:08 AM

ವಿಶ್ವ ಆಹಾರ ದಿನಾಚರಣೆ ಅಂಗವಾಗಿ ರಾಸಾಯನಿಕ ಮತ್ತು ಔಷಧ ಮುಕ್ತ ಬೆಳೆ ಬೆಳೆಯುವ ಕುರಿತು ರೈತರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಕೊಪ್ಪಳ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ  ತೋಟಗಾರಿಕೆ ಇಲಾಖೆ, ಪಶುಸಂಗೋಪನ ಇಲಾಖೆ,  ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಹಾರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಇದೇ ವೇಳೆ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಮಾತನಾಡಿದ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಸಾವಯವ ಕೃಷಿಗೆ ಸರ್ಕಾರ ಒತ್ತು ನೀಡಿದ್ದು, ರಾಸಾಯನಿಕ ಮತ್ತು ಔಷಧ ಮುಕ್ತ ಬೆಳೆ ಬೆಳೆಯುವ ಕುರಿತು ರೈತರಿಗೆ ಮನವರಿಕೆ ಮಾಡಲು ಕೃಷಿ ಸಖಿಯರನ್ನು ನೇಮಿಸಲಾಗಿದೆ ಎಂದರು.

ಜಿಂಟಿ ಕೃಷಿ ನಿರ್ದೇಶಕ ಟಿ.ಎಸ್ ರುದ್ರೇಶಪ್ಪ ಮಾತನಾಡಿ, ಗುಣಮಟ್ಟದ ಆಹಾರ ಉತ್ಪಾದಿಸುವ ಉದ್ದೇಶದಿಂದ ಸರ್ಕಾರ ನೈಸರ್ಗಿಕ ಕೃಷಿ, ಪಾರಂಪರಿಕ ಕೃಷಿ ವಿಕಾಸ್ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.  ರೈತ ಮಹಿಳೆ ಸೌಮ್ಯಾ, 2 ಎಕರೆಯಲ್ಲಿ ತೋಟಗಾರಿಕೆ, 5 ಎಕರೆಯಲ್ಲಿ ಮಳೆಯಾಶ್ರಿತ ರಾಸಾಯನಿಕ ಮುಕ್ತವಾಗಿ ಬೆಳೆಯುತ್ತಿದ್ದು, ತಾವೇ ಮಾರುಕಟ್ಟೆ ಕಲ್ಪಿಸಿಕೊಂಡಿದ್ದೇವೆ. ತಮ್ಮ ಆಹಾರ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದೆ ಎಂದು ತಿಳಿಸಿದರು.

ಪಶು ಇಲಾಖೆ ಉಪ ನಿರ್ದೇಶಕ ಡಾ.ಪಿ.ಎಂ. ಮಲ್ಲಯ್ಯ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಕೃಷಿ ಉಪ ನಿರ್ದೇಶಕ ಎಲ್.ಸಿದ್ದೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು,  ರೈತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror