ಜೈವಿಕ ಕೃಷಿಯ ಮಹತ್ವದ ಬಗ್ಗೆ ವಿಶ್ವದೆಲ್ಲೆಡೆ ಇಂದು ಜಾಗೃತಿ ಮೂಡಿದೆ. ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು ಹೆಚ್ಚುತ್ತಿದೆ. ಭೂಮಿಯ ರಕ್ಷಣೆಯಲ್ಲಿ ಜೈವಿಕ ಕೃಷಿ ಮಹತ್ವದ ಪಾತ್ರ ವಹಿಸುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಹೇಳಿದರು.…..ಮುಂದೆ ಓದಿ….
ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತದಲ್ಲಿ ಪ್ರಸ್ತುತ, ಬಹುದೊಡ್ಡ ಪ್ರಮಾಣದಲ್ಲಿ ನೈಸರ್ಗಿಕ ವಿಧಾನದಲ್ಲಿ ಕೃಷಿ ಬೆಳೆಗಳ ಉತ್ಪಾದನೆ ಮಾಡಲಾಗುತ್ತಿದೆ. ಭಾರತದ ವಿಶಿಷ್ಟ ನೈಸರ್ಗಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ. ಇದರಿಂದ ರಫ್ತು ಹೆಚ್ಚಳಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು. ಸಹಕಾರಿ ಸಂಸ್ಥೆಗಳ ಮೂಲಕ ದೇಶದ ರೈತರು ಜೈವಿಕ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ದೇಶದ ರೈತರು ಅಪಾರ ಸಾಮರ್ಥ್ಯ ಹೊಂದಿದ್ದು, ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ನೈಸರ್ಗಿಕ ಕೃಷಿ ವಿಧಾನ ಇಂದು ರಾಷ್ಟ್ರೀಯ ಆದ್ಯತೆಯಾಗಿ ಮಹತ್ವ ಪಡೆದುಕೊಂಡಿದೆ. ಮಣ್ಣು, ನೀರು ಸಂರಕ್ಷಣೆಗೆ ನೈಸರ್ಗಿಕ ಕೃಷಿ ವಿಧಾನವೊಂದೇ ಪರ್ಯಾಯ ಮಾರ್ಗವಾಗಿದೆ ಎಂದು ತಿಳಿಸಿದರು.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490