ವಿಶ್ವ ಜಲ ದಿನ | ನೀರಿನ ಸುಸ್ಥಿರ ನಿರ್ವಹಣೆಗಾಗಿ ಜಾಗೃತಿ

March 22, 2025
10:59 PM
ಅರಣ್ಯನಾಶ, ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ನೀರಿನ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೂ ಜಲಸಂಪನ್ಮೂಲವನ್ನು ಉಳಿಸುವ ಕಾರ್ಯ ನಾವು ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. (Photo: File)

ಇಂದು ವಿಶ್ವ ಜಲ ದಿನ. ಇಂದು ನೀರಿನ ಮಹತ್ವವನ್ನು ಹಲವು ಕಡೆ, ಹಲವು ಸಂದರ್ಭಗಳು ಎತ್ತಿ ತೋರಿಸುತ್ತದೆ. ನೀರಿನ ಸಂಪನ್ಮೂಲಗಳ  ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.ಈ  ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ತಮ್ಮ ಪೋಸ್ಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಲ ಜೀವರಾಶಿಗಳಿಗೂ ಅಗತ್ಯವಿರುವ ನೀರನ್ನು ಸಂರಕ್ಷಿಸುವ, ಮಿತವಾಗಿ ಬಳಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

Advertisement

ಅರಣ್ಯನಾಶ, ಹವಾಮಾನ ಬದಲಾವಣೆ, ತಾಪಮಾನ ಏರಿಕೆ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ನೀರಿನ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೂ ಜಲಸಂಪನ್ಮೂಲವನ್ನು ಉಳಿಸುವ ಕಾರ್ಯ ನಾವು ಮಾಡಬೇಕಿದೆ ಎಂದು ಹೇಳಿದ್ದಾರೆ. ಹಿಮನದಿಗಳ ಸಂರಕ್ಷಣೆ ಈ ವರ್ಷದ ವಿಶ್ವ ಜಲದಿನದ ಘೋಷ ವಾಕ್ಯವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧೆಡೆಗಳಲ್ಲಿ  ವಿಶ್ವ ಜಲ ದಿನಾಚರಣೆ ಆಚರಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಗರಸಭೆ ವತಿಯಿಂದ, ಸಾರ್ವಜನಿಕರ ಸಹಕಾರದೊಂದಿಗೆ ನಡೆದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ  ಗಗನಾರ್ಯ ಅಯ್ಯ ಪಂತರ ಕಲ್ಯಾಣಿಯ ಸ್ವಚ್ಛತಾ ಕಾರ್ಯ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮಾತನಾಡಿ, ಯಾವುದೇ ನದಿ ಮೂಲಗಳಿಲ್ಲದೇ ಇರುವ ಬಯಲು ಸೀಮೆಯ ಪ್ರದೇಶಗಳಲ್ಲಿ, ಕೆರೆ, ಕುಂಟೆ ಮೊದಲಾದ ನೀರಿನ ಮೂಲಗಳನ್ನು ಕಾಪಾಡಿಕೊಳ್ಳಬೇಕಿರುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ನೀರಿನ ಸಂಗ್ರಹಣ ವ್ಯವಸ್ಥೆಗಳು ವಿವಿಧ ಕಾರಣಗಳಿಂದಾಗಿ ಕ್ಷೀಣಿಸುತ್ತಿರುವುದರಿಂದ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದು ಕಂಡು ಬಂದಿದೆ. ಈ ದಿಸೆಯಲ್ಲಿ ಜಲ ಮೂಲಗಳನ್ನು ಸಂರಕ್ಷಿಸುವ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಧೀರಜ್ ಮುನಿರಾಜು, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group