ಶ್ರೀರಾಮ ಜನ್ಮಭೂಮಿಯಲ್ಲಿ ದೀಪೋತ್ಸವ | ಅಯೋಧ್ಯೆ ಬೆಳಗಿದ 24 ಲಕ್ಷ ಹಣತೆಗಳು

November 13, 2023
1:29 PM

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ದೀಪಾವಳಿ ಹಬ್ಬದ (Deepavali Featival) ಸಂಭ್ರಮ ಮುಗಿಲು ಮುಟ್ಟಿದೆ. ಎಲ್ಲೆಲ್ಲೂ ದೀಪಗಳ ಬೆಳಕಿನಲ್ಲಿ ರಾಮನಾಮದ ಘೋಷಣೆ ಮೊಳಗಿದೆ.

Advertisement
Advertisement
Advertisement
Advertisement

ಉತ್ತರ ಪ್ರದೇಶ (Uttar Pradesh) ಸರ್ಕಾರದಿಂದ ಸರಯೂ ನದಿ ದಂಡೆಯಲ್ಲಿ ದೀಪೋತ್ಸವ ಆಯೋಜಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸೇರಿದಂತೆ 50ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ಸಂಭ್ರಮದಲ್ಲಿ ಭಾಗಿಯಾಗಿದ್ದರು. ಬರೋಬ್ಬರಿ 24 ಲಕ್ಷ ಹಣತೆಗಳು ಅಯೋಧ್ಯೆಯನ್ನು ಬೆಳಗಿದ್ದು, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಯಿತು.

Advertisement

2017ರಿಂದ ರಾಮಮಂದಿರ (RamaMandir) ಪ್ರದೇಶದಲ್ಲಿ ದೀಪೋತ್ಸವ ಆಯೋಜಿಸಲಾಗುತ್ತಿದೆ ಮತ್ತು ಪ್ರತಿ ವರ್ಷ ಹೊಸ ದಾಖಲೆ ಸೃಷ್ಟಿಸುತ್ತಿದೆ. 2022ರಲ್ಲಿ ಅಯೋಧ್ಯೆಯ ಸರಯೂ ನದಿ ತೀರದಲ್ಲಿ 16 ಲಕ್ಷ ಹಣತೆ ಬೆಳಕಿಸಲಾಗಿತ್ತು. ಈ ಬಾರಿ 25,000 ಸ್ವಯಂಸೇವಕರು ಒಟ್ಟು 51 ಘಾಟ್‌ಗಳಲ್ಲಿ 24 ಲಕ್ಷ ಹಣತೆ ಅಯೋಧ್ಯೆಯಲ್ಲಿ ಬೆಳಗಿಸಿದ್ದಾರೆ.

2017ರಲ್ಲಿ 51,000 ಹಣತೆಗಳನ್ನು ಹಚ್ಚಲಾಗಿತ್ತು. 2019ರಲ್ಲಿ 4.10 ಲಕ್ಷ ಹಣತೆಗಳನ್ನು ಬೆಳಗಿದ್ದು, 2020ರಲ್ಲಿ 6 ಲಕ್ಷಕ್ಕೂ ಹೆಚ್ಚು, 2021ರಲ್ಲಿ 9 ಲಕ್ಷಕ್ಕೂ ಅಧಿಕ, 2022ರಲ್ಲಿ ಸುಮಾರು 15 ಲಕ್ಷ ದೀಪಗಳನ್ನು ಹಚ್ಚಲಾಗಿತ್ತು. ಇದು ವಿಶ್ವ ದಾಖಲೆಗೆ ಸಾಕ್ಷಿಯಾಗಿತ್ತು. ಈ ವರ್ಷ 2023ರಲ್ಲಿ 24 ಲಕ್ಷ ದೀಪ ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ ಬರೆಯಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror