MIRROR FOCUS

ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ | ರಾಮ ಪ್ರತಿಷ್ಠಾಪನೆ ಲೈವ್‌ ವೀಕ್ಷಣೆಗೆ ಮಾರಿಷಸ್ ಉದ್ಯೋಗಿಗಳಿಗೆ 2 ಗಂಟೆ ವಿಶೇಷ ಬ್ರೇಕ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇವಲ ಭಾರತ(India) ಮಾತ್ರವಲ್ಲ. ಇಡೀ ವಿಶ್ವವೇ(World) ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ(Ram Prana Prathista) ಪಾಲ್ಗೊಳ್ಳಲು ಕಾತುರವಾಗಿದೆ. ಅಯೋಧ್ಯೆಯಲ್ಲಿ (Ayodhya) ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ವೀಕ್ಷಿಸಲು ಮಾರಿಷಸ್ (Mauritius) ಸರ್ಕಾರವು(Govt) ಜ.22 ರಂದು ಹಿಂದೂ (Hindu) ಧರ್ಮೀಯ ಉದ್ಯೋಗಿಗಳಿಗೆ 2 ಗಂಟೆಗಳ ವಿಶೇಷ ಸಮಯಾವಕಾಶ ನೀಡುವುದಾಗಿ ಪ್ರಕಟಿಸಿದೆ. ಜ.22 ರಂದು ಎರಡು ಗಂಟೆಗಳ ವಿರಾಮ ನೀಡಬೇಕೆಂದು ಹಿಂದೂ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಮನವಿಗೆ ಮಾರಿಷಸ್ ಸರ್ಕಾರ ಒಪ್ಪಿಗೆ ನೀಡಿದೆ.

Advertisement

ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇತೃತ್ವದ ಮಂತ್ರಿ ಮಂಡಳಿಯು ಶುಕ್ರವಾರ ಸಭೆ ಸೇರಿ ರಾಮಮಂದಿರ ಧಾರ್ಮಿಕ ಕಾರ್ಯಕ್ರಮವು ಸಾಂಸ್ಕೃತಿಕ ಮಹತ್ವವನ್ನು ಗುರುತಿಸಿದೆ ಮತ್ತು ಆಚರಣೆಯಲ್ಲಿ ಭಕ್ತರು ಭಾಗವಹಿಸಲು ಅನುಕೂಲ ಮಾಡಿಕೊಡಲು 2 ಗಂಟೆಗಳ ವಿರಾಮ ನೀಡುವುದಾಗಿ ಪ್ರಕಟಿಸಿತು. ಮಾರಿಷಸ್‌ನನಲ್ಲಿ ಹಿಂದೂ ಧರ್ಮವು ಪ್ರಮುಖ ಸ್ಥಾನವನ್ನು ಹೊಂದಿದೆ. 2011ರ ಅಂಕಿಅಂಶಗಳ ಪ್ರಕಾರ ಹಿಂದೂಗಳು ಸರಿಸುಮಾರು 48.5 ಪ್ರತಿಶತ ಜನಸಂಖ್ಯೆ ಹೊಂದಿದ್ದಾರೆ.

ಆಫ್ರಿಕಾ ಖಂಡದ ದೇಶಗಳ ಪೈಕಿ ಮಾರಿಷಸ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಂದೂಗಳಿದ್ದಾರೆ. ಜಾಗತಿಕವಾಗಿ ಭಾರತ, ನೇಪಾಳದ ನಂತರ ಅತಿ ಹೆಚ್ಚು ಹಿಂದೂಗಳಿರುವ ಮೂರನೇ ರಾಷ್ಟ್ರ ಮಾರಿಷಸ್‌ ಆಗಿದೆ. ವಸಾಹತುಶಾಹಿ ಯುಗದಲ್ಲಿ ಭಾರತೀಯರನ್ನು ಫ್ರೆಂಚ್ ಮತ್ತು ಬ್ರಿಟಿಷ್ ತೋಟಗಳಿಗೆ ಒಪ್ಪಂದದ ಕಾರ್ಮಿಕರಾಗಿ ಕರೆತರಲಾಗಿತ್ತು. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಂತಹ ಭಾರತೀಯ ರಾಜ್ಯಗಳಿಂದ ವಲಸೆ ಬಂದ ಪರಿಣಾಮ ಮಾರಿಷಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದೆ.

Source : Mint

The Government of Mauritius (Govt) has announced that it will give 2 hours of special time to Hindu religious employees on January 22 to watch Rama's Prana Pratishta program in Ayodhya. The Mauritius government has agreed to the request of Hindu socio-cultural organizations to give a two-hour break on January 22.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

23 minutes ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

29 minutes ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

12 hours ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

13 hours ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

19 hours ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

24 hours ago