ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ನಿರ್ಮಾಣದ ದೃಷ್ಟಿಯಿಂದ ಬಾಂಬ್ ನಿಷ್ಕ್ರಿಯ ಮತ್ತು ಪತ್ತೆ ದಳದ(ಬಿಡಿಡಿಎಸ್) ಎರಡು ತಂಡಗಳನ್ನು ಭದ್ರತೆಗಾಗಿ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್, ಲಖನೌ ಬೆಂಚ್‌ನ ಹೈಕೋರ್ಟ್, ವಾರಣಾಸಿ ಕಮಿಷನರೇಟ್, ಪಿಎಸಿ ಗೊಂಡಾ ಮತ್ತು ಲಖನೌದ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್‌ನಲ್ಲಿ ಐದು ಹೊಸ ಬಿಡಿಡಿಎಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಯೋಧ್ಯೆಯ ರಾಮ ಜನ್ಮಭೂಮಿ ಸಂಕೀರ್ಣದ ಭದ್ರತೆಗಾಗಿ ಬಿಡಿಡಿಎಸ್‌ನ ಎರಡು ತಂಡಗಳನ್ನು ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಬಿಡಿಡಿಎಸ್ ಜೊತೆಗೆ, ಅಯೋಧ್ಯೆಯಲ್ಲಿ ಎರಡು ಹೊಸ ವಿಧ್ವಂಸಕ ವಿರೋಧಿ ತಪಾಸಣೆ ತಂಡಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
13 ವರ್ಷಗಳ ನಂತರ, ಉತ್ತರ ಪ್ರದೇಶ ಪೊಲೀಸರ ಭದ್ರತಾ ವಿಭಾಗದ ಬಿಡಿಡಿಎಸ್ ತಂಡಗಳನ್ನು ರಾಜ್ಯ ಮಟ್ಟದಲ್ಲಿ ಹೆಚ್ಚಿಸಲಾಗಿದೆ.ಈಗ ರಾಜ್ಯಾದ್ಯಂತ ಬಿಡಿಡಿಎಸ್‌ನ 31 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…