ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರ 2024ರ ಆರಂಭದಲ್ಲಿ ಭಕ್ತರ ದರ್ಶನಕ್ಕೆ ಮುಕ್ತವಾಗಲಿದ್ದು ಮಂದಿರದಲ್ಲಿ ಪ್ರತಿಷ್ಠಾಪನೆಯಾಗುವ ಶ್ರೀರಾಮ ಮೂರ್ತಿಯ ಕೆತ್ತನೆ ಕಾರ್ಯ ಆರಂಭವಾಗಿದೆ. ಕರ್ನಾಟಕದ ಇಬ್ಬರು ಶಿಲ್ಪಿ ಮೂರ್ತಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಗಣೇಶ ಭಟ್ ತಮ್ಮ ಶಿಷ್ಯ ವಿಪಿನ್ ಭದೋರಿಯಾರೊಂದಿಗೆ ಸೇರಿ ಕರ್ನಾಟಕದಿಂದ ಕಲ್ಲನ್ನು ಆಯ್ಕೆ ಮಾಡಿದ್ದಾರೆ. ಹಾಗೂ ಇನ್ನೊಬ್ಬ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಕರ್ನಾಟಕದವರಾಗಿದ್ದು ಕರ್ನಾಟಕದ ವಿವಿಧ ಕಡೆಗಳಿಂದ ಕಲ್ಲುಗಳನ್ನು ಸಂಗ್ರಹಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel