ಆಯುರ್ವೇದ ಚಿಕಿತ್ಸಾ ಪದ್ಧತಿಯು ಪ್ರಾಚೀನ ವೈದ್ಯ ವಿಜ್ಞಾನವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.
ದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯ 8ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿದ ಬಳಿಕ ಅವರು, ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಜಗತ್ತಿಗೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಸಂಸ್ಥೆ ಪ್ರಾರಂಭಗೊಂಡು ಎಂಟು ವರ್ಷಗಳ ಅಲ್ಪಾವಧಿಯಲ್ಲಿ ಮಹತ್ವದ ಸಾಧನೆ ಮಾಡಿದೆ ಎಂದು ಶ್ಲಾಘಿಸಿದರು. ಆಯುರ್ವೇದ ಚಿಕಿತ್ಸೆಯ ಬಗ್ಗೆ ಮುಂದಿನ ತಲೆ ಮಾರಿಗೂ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು. ಆದಿವಾಸಿಗಳ ಸಂಸ್ಕೃತಿಯಲ್ಲಿ ಆಯುರ್ವೇದ ಗಿಡಮೂಲಿಕೆಗಳ ಬಗ್ಗೆ ಅಪಾರ ಜ್ಞಾನವಿದ್ದು, ಆಧುನಿಕ ಕಾಲದಲ್ಲಿ ಅವುಗಳನ್ನು ಬಳಸಿಕೊಳ್ಳುವ ಅಗತ್ಯವಿದೆ ಎಂದು ಕರೆ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel