ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಈ ಕುರಿತು ಜಿಲ್ಲೆಯ ಎಲ್ಲಾ ಸಂಬಂಧಿತ ಆಸ್ಪತ್ರೆಗಳಿಗೆ ಅಧಿಕೃತ ಪತ್ರವನ್ನು ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಹೆಚ್ಒ, ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಆಯುಷ್ಮಾನ್ ಕಾರ್ಡ್ ಕಡ್ಡಾಯವಲ್ಲ. ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯು ಇದ್ದರೆ ಸಾಕು ಎಂದು ಮಾಹಿತಿ ನೀಡಿದ್ದಾರೆ.
ಇದಲ್ಲದೆ, ಜಿಲ್ಲೆಯಲ್ಲಿ ಎನ್ಎಚ್ಎಂ (NHM) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ನೌಕರರ ಮೂರು ತಿಂಗಳ ಬಾಕಿ ವೇತನವಾಗಿ ಒಟ್ಟು ₹9.67 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




