Advertisement
MIRROR FOCUS

ಆರ್ಥಿಕ ನಷ್ಟದ ಹಿನ್ನೆಲೆ | ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಸಾಧ್ಯತೆ | ಗ್ರಾಹಕರ ಮೇಲೆ ಹೆಚ್ಚುತ್ತಿದೆ ಹೊರೆ |

Share

ಹಳ್ಳಿಗಳಲ್ಲಿ ದನ(cattle) ಸಾಕುವವರ ಸಂಖ್ಯೆ ದಿನದಿಂದ ದಿನಕ್ಕ ಕುಸಿಯುತ್ತಿದೆ. ಅದರಲ್ಲೂ ಮಲೆನಾಡು ಗಿಡ್ಡ ತಳಿಗಳಂತೂ(small breeds ) ಯಾರಿಗೂ ಬೇಡ. ಹೈನುಗಾರಿಕೆ(dairy farmers) ಮಾಡುವವರು ಜಾಸ್ತಿ ಹಾಲು ಕೊಡುವ ಜರ್ಸಿ ದನಗಳನ್ನೇ(jersey cow) ಸಾಕುತ್ತಾರೆ. ಕೊನೆ ಪಕ್ಷ ಹಳ್ಳಿಗಳಲ್ಲಿ(villages ) ತಮ್ಮ ಮನೆ ಬಳಕೆಗಾದರು ದನ ಸಾಕಿ ಹಾಲು ಉಪಯೋಗಿಸಿಕೊಂಡರೆ ಒಳ್ಳೆಯದು. ಇತ್ತ ಹಳ್ಳಿ ಜನಕ್ಕೂ ನಂದಿನಿ ಪ್ಯಾಕೆಟ್‌ ಹಾಲೇ ಬೇಕು. ಇದರ ಪರಿಣಾಮ ಈಗ ಮತ್ತೆ ಹಾಲಿನ ದರ ಏರಿಕೆಗೆ(Nandini Milk Rate) ಚಿಂತನೆ ನಡೆದಿದೆ.

ಮತ್ತೆ ನಂದಿನಿ ಹಾಲಿನ ದರ  ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಬೆಲೆ ಏರಿಕೆ ಯಾಕೆ? : ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ.  ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.

The number of cattle keepers in the villages is decreasing day by day. Especially, no one wants the small breeds of the highlands. The dairy farmers keep only the jersey cows that give more milk. Finally, it would be good if the people in the villages used the milk of the cows at home. Nandini Milk Rate has been considered for price increase.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

8 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

13 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

17 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

21 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago