Advertisement
MIRROR FOCUS

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |

Share

ಚುನಾವಣೆ(Election) ಬಂತೆಂದರೆ ಮತದಾರರಿಗೆ(Voters) ಆಮಿಷ ಒಟ್ಟುವ ಕೆಲಸಗಳನ್ನು ಪಕ್ಷಗಳು ಮಾಡಿಯೇ ಮಾಡುತ್ತವೆ. ಹಣ(Money), ಹೆಂಡ(Liquor), ಸೀರೆ(Sari), ಕುಕ್ಕರ್‌(Cocker), ಡ್ರಗ್ಸ್‌(Drugs), ಚಿನ್ನಾಭರಣ(Gold) ಎಲ್ಲವನ್ನು ಮತದಾರರಿಗೆ ಕೊಟ್ಟು ತನ್ನತ್ತ ಸೆಳೆಯುವ ಕೆಲಸವನ್ನು ಮಾಡುತ್ತವೆ. ಇದೀಗ ಲೋಕಸಭೆ ಚುನಾವಣಾ(Lokasabha Election) ನೀತಿ ಸಂಹಿತೆ ಜಾರಿ(Code of conduct) ಹಿನ್ನೆಲೆ ರಾಜ್ಯಾದ್ಯಂತ ಪೊಲೀಸರು(Police) ಫುಲ್‌ ಅಲರ್ಟ್‌ ಆಗಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿ ಅಕ್ರಮ ವಸ್ತುಗಳ(Illegal) ಸಾಗಾಟ ತಡೆಗೆ ಕ್ರಮ ವಹಿಸಿದ್ದಾರೆ. ಈ ವೇಳೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 15.78 ಕೋಟಿ ರೂ. ನಗದು, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನ ಜಪ್ತಿ(Seize) ಮಾಡಲಾಗಿದೆ.

ರಾಜ್ಯದಲ್ಲಿ ಈವರೆಗೆ 15.78 ಕೋಟಿ ರೂ. ನಗದು, 23 ಕೋಟಿ ರೂ. ಮೌಲ್ಯದ ಮದ್ಯ, 65 ಲಕ್ಷ ರೂ. ಮೌಲ್ಯದ ಡ್ರಗ್ಸ್, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಹಣ ಜಪ್ತಿ?

ಧಾರವಾಡ: ನಗರದ ಹೊರವಲಯದ ಹಳಿಯಾಳ್ ಚೆಕಪೋಸ್ಟ್‌ನಲ್ಲಿ ದಾಖಲೆ ಇಲ್ಲದೇ ಸಾಗಿಸುತಿದ್ದ 1.49 ಲಕ್ಷ ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಈ ಹಣವನ್ನು ಹುಬ್ಬಳ್ಳಿಯಿಂದ ಅಳ್ನಾವರ ಪಟ್ಟಣಕ್ಕೆ ಸಾಗಿಸಲಾಗುತ್ತಿತ್ತು. ಮೊಹ್ಮದ್‌ ಶಮಶುದ್ದೀನ್ ಎಂಬವರ ಕಾರಿನಲ್ಲಿ ಹಣವನ್ನು ವಶಕ್ಕೆ ಪಡೆದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜಿ ಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆಯಿಲ್ಲದೇ ಸದಾಗಿಸುತ್ತಿದ್ದ ಬರೋಬ್ಬರಿ 1.44 ಕೋಟಿ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತುಮಕೂರಿನಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಖಾಸಗಿ ಎಟಿಎಂ ಏಜೆನ್ಸಿ ವಾಹನದಲ್ಲಿದ್ದ ಹಣವನ್ನು ಜಪ್ತಿ ಮಾಡಲಾಗಿದೆ. ಸ್ಥಳಕ್ಕೆ ಹಿರಿಯೂರು ತಹಶಿಲ್ದಾರ್ ರಾಜೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪಾಲಾರ್‌ ಚೆಕ್‌ಪೋಸ್ಟ್‌ ಬಳಿ ದಾಖಲೆಯಿಲ್ಲದೇ ಸಾಗಿಸುತ್ತುದ್ದ 2.70 ಲಕ್ಷ ರೂ.ಗಳಷ್ಟು ನಗದು ಹಣವನ್ನು ಸೀಜ್‌ ಮಾಡಲಾಗಿದೆ. ಶಿವಮೂರ್ತಿ ಎಂಬುವರ ಬಳಿಯಿದ್ದ ಬ್ಯಾಗ್‌ನಲ್ಲಿ ಹಣ ಪತ್ತೆಯಾಗಿತ್ತು. ಚೆಕ್‌ಪೋಸ್ಟ್‌ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಸ್ಪಷ್ಟ ಉತ್ತರ, ದಾಖಲೆಗಳು ಸಿಗದ ಹಿನ್ನೆಲೆಯಲ್ಲಿ ಹಣವನ್ನು ಜಪ್ತಿ ಮಾಡಲಾಯಿತು.

– ಅಂತರ್ಜಾಲ ಮಾಹಿತಿ

Police are on full alert across the state. Checkposts have been set up at important places and steps have been taken to stop the movement of illegal goods. At this time, a total of Rs 15.78 crore was illegally transported in various districts across the state. Cash, Rs 1.27 crore. Valuable gold jewelery has been seized.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

14 seconds ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

23 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

23 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

24 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago