MIRROR FOCUS

ರಾಜ್ಯಕ್ಕೆ ಕೇಂದ್ರದಿಂದ ಬರ ಪರಿಹಾರ ನೀಡದ ಹಿನ್ನೆಲೆ | ಕರ್ನಾಟಕ ಸರ್ಕಾರದಿಂದ NDRFಗೆ ಅರ್ಜಿ ಸಲ್ಲಿಕೆ | ಇಂದು ಸುಪ್ರೀಂನಲ್ಲಿ ವಿಚಾರಣೆ

Share

ರಾಜ್ಯಾದ್ಯಂತ ಮಳೆ ಕೊರತೆಯಿಂದ(Rain Crisis) ಬರಗಾಲ(Drought) ತಾಂಡವಾಡುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿದೆ. ಕಷ್ಟಪಟ್ಟು ಬೆಳೆದ ಬೆಳೆ(Crop) ಮಳೆ ಇಲ್ಲದ ಕಾರಣ ಕೈಗೆ ಬಾರದೆ ರೈತರು(Farmer) ಕಂಗಾಲಾಗಿದ್ದಾರೆ. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರಗಳು(Govt) ಕಣ್ಣು ಮುಚ್ಚಿ ಕುಳಿತಿವೆ. ರಾಜ್ಯ ಸರ್ಕಾರ(State Govt) ಕೇಂದ್ರದ(Central) ಮೇಲೆ ಬರ ಪರಿಹಾರ ನೀಡಿಲ್ಲ ಎಂದು ಆರೋಪ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂ. ಬರ ಪರಿಹಾರ ಕೋರಿ ಕರ್ನಾಟಕ ಸರ್ಕಾರ(Karnataka Govt) ಅರ್ಜಿ ಸಲ್ಲಿಸಿದ್ದು, ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ.

Advertisement

ಬರದ ಪ್ರಮಾಣ ಎಷ್ಟಿದೆ? : ರಾಜ್ಯವು ಕೇಂದ್ರ ಸರ್ಕಾರಕ್ಕೆ (Karnataka govt) ಸಲ್ಲಿಸಿದ ವರದಿ ಪ್ರಕಾರ, 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಣಾಮದಿಂದಾಗಿ 48 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ (ಕೃಷಿ ಹಾಗೂ ತೋಟಗಾರಿಕಾ ಬೆಳೆ) ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2023ರ ಅಕ್ಟೋಬರ್‌ನಲ್ಲಿ ನಷ್ಟ ಪರಿಶೀಲಿಸಲು ಅಂತರ-ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ಸಹ ರಾಜ್ಯಕ್ಕೆ ಭೇಟಿ ನೀಡಿತ್ತು. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ (ಜೂನ್) ಮಳೆಯ ಕೊರತೆ ಶೇ.56 ರಷ್ಟಿತ್ತು. ಅಂದರೆ 122 ವರ್ಷಗಳ ಬಳಿಕ ಈ ಪ್ರಮಾಣದ ಕೊರತೆ ಎದುರಾಗಿದೆ. ಜೊತೆಗೆ ಆಗಸ್ಟ್ ತಿಂಗಳಲ್ಲಿ ಶೇ.73 ಮಳೆ ಕೊರತೆ ಉಂಟಾಗಿದೆ.

ಅಷ್ಟೇ ಅಲ್ಲ ಕಳೆದ ವರ್ಷದ ಮಾನ್ಸೂನ್ ಸಮಯದಲ್ಲಿಯೂ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 18% ಕಡಿಮೆ ಮಳೆಯಾಗಿದೆ. 2015ರ ಬಳಿಕ ಈ ಪ್ರಮಾಣದಲ್ಲಿ ಕಡಿಮೆ ಮಳೆ ಬಿದ್ದಿದೆ. ಮುಂಗಾರು ನಂತರದ ಅವಧಿಯು ಸಹ ರಾಜ್ಯಕ್ಕೆ ಹೆಚ್ಚಿನ ಮಳೆಯನ್ನು ತರಲಿಲ್ಲ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರದಿಂದ ಮೂರು ಬಾರಿ ಪತ್ರ ಬರೆದಿದ್ದರು, ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದರೂ, ಕೇಂದ್ರ ಸರ್ಕಾರ ಪರಿಹಾರ ಬಿಡುಗೆ ಮಾಡುವ ಮನಸ್ಸು ಮಾಡಿಲ್ಲ. ಆದ್ದರಿಂದ ಪರಿಹಾರ ಬಿಡುಗಡೆಗೆ ಕಟ್ಟಿನಿಟ್ಟಿನ ಸೂಚನೆ ನೀಡುವಂತೆ ಕರ್ನಾಟಕ ಸರ್ಕಾರ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

  • ಅಂತರ್ಜಾಲ ಮಾಹಿತಿ

18,171 crore to the state under the National Disaster Management Fund (NDRF). Karnataka Govt has filed an application seeking drought relief, today (Monday) hearing will be held in the Supreme Court. A bench headed by Justice BR Gavai will hear the petition.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |

ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ…

2 hours ago

ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು…

3 hours ago

ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ | ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಜನರ ಅನುಕೂಲಕ್ಕಾಗಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ ಎಂದು ಸಾರಿಗೆ  ಸಚಿವ…

3 hours ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ |

ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ…

3 hours ago

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ | ಆಧುನಿಕ ತಂತ್ರಜ್ಞಾನಕ್ಕೆ ಸಾಕ್ಷಿಯಾಗಿರುವ ಪಂಬನ್‌ ಸೇತುವೆ |

ದಕ್ಷಿಣ ರೈಲ್ವೆಯು ರೈಲು ವಿಕಾಸ ನಿಗಮ ಸಹಯೋಗದೊಂದಿಗೆ 531 ಕೋಟಿ ರೂಪಾಯಿ ವೆಚ್ಚದಲ್ಲಿ…

3 hours ago

ಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳ

ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50…

6 hours ago