ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…