ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

May 5, 2025
12:21 PM

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ ವೇಳೆಯಲ್ಲಿ  ವಿಶೇಷ ಧಾರ್ಮಿಕ  ಕೈಂಕರ್ಯಗಳೊಂದಿಗೆ  ದೇವಾಲಯದ ದ್ವಾರವನ್ನು ತೆರೆಯಲಾಗಿದೆ. ಚಮೋಲಿ ಜಿಲ್ಲೆಯಲ್ಲಿರುವ  ಬದರೀನಾಥ ಧಾಮಕ್ಕೆ ಮೊದಲು ಉದ್ಧವ , ಗರುಡ ಹಾಗೂ ಆದಿಗುರು ಶಂಕರಾಚಾರ್ಯರ  ಪ್ರತಿಮೆಗಳನ್ನು  ಉತ್ಸವದಲ್ಲಿ  ದೇಗುಲಕ್ಕೆ ತರಲಾಯಿತು. ಇದೇ ವೇಳೆ  ಭಾಮನಿ ಗ್ರಾಮದಲ್ಲಿದ್ದ ಕುಬೇರ ಮತ್ತು ನಂದಾದೇವಿಯ ಉತ್ಸವ ಮೂರ್ತಿಗಳನ್ನು  ಸಹ  ದೇಗುಲಕ್ಕೆ ತರಲಾಗಿದ್ದು,  ರಾತ್ರಿಯವರೆಗೂ  ಬದರೀನಾಥ ದೇಗುಲದಲ್ಲಿ ಪೂಜೆ ನಡೆಯಿತು. ಬದರೀನಾಥ, ಕೇದಾರನಾಥ ದೇವಾಲಯ ಸಮಿತಿಯು ಇಡೀ ದೇವಾಲಯವನ್ನು 15 ಕ್ವಿಂಟಾಲ್ ಹೂಗಳಿಂದ ಅಲಂಕರಿಸಿದ್ದು,  ಭಾರೀ ಪ್ರಮಾಣದಲ್ಲಿ  ಭಕ್ತರು  ದರ್ಶನಕ್ಕಾಗಿ ಆಗಮಿಸಿದ್ದಾರೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ  ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಹಾಗೂ  ಸುರಕ್ಷತೆಗಾಗಿ  ಅರೆಸೇನಾ ಪಡೆಗಳನ್ನು ನಿಯೋಜಿಸಿದೆ.

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror