ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ |

Advertisement
Advertisement

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ  ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜನೆ ರೂಪಿಸಿದೆ.

Advertisement

ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಿದ್ದು, ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ. ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.

Advertisement
Advertisement

ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ.

1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈಗಾಗಲೇ ಇತರ 23 ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ತರಲಾಗಿದ್ದು, ಕರ್ನಾಟಕದಲ್ಲಿ ಕೂಡ ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ |"

Leave a comment

Your email address will not be published.


*