Opinion

ತೂಕ ಇಳಿಸಲು ಸಮತೋಲಿತ ಆಹಾರ ಮುಖ್ಯ | ಅಧಿಕ ತೂಕ ಇತರ ಕಾಯಿಲೆಗಳಿಗೆ ಕಾರಣವಾಗಬಲ್ಲದು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಡಯಟ್ ಅಂದರೆ ಸಮತೋಲಿತ ಉತ್ತಮ ಆಹಾರವನ್ನು ಸರಿಯಾದ ಸಮಯದಲ್ಲಿ ತಿನ್ನುವುದು. ನಮ್ಮ ದೇಹಕ್ಕೆ ಬೇಕಾಗಿರುವ ಪ್ರಮಾಣಕ್ಕಿಂತ ಯಥೇಚ್ಛವಾಗಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ.

Advertisement

ಸಾಮಾನ್ಯವಾಗಿ ದೇಹದ ತೂಕದಲ್ಲಿ ಕೊಂಚ ಜಾಸ್ತಿ ಆದರೂ ಖಿನ್ನತೆಗೆ ಒಳಗಾಗುತ್ತೇವೆ.ಅಧಿಕ ಬೊಜ್ಜಿನ ಸಮಸ್ಯೆಯಿಂದ ಅದೆಷ್ಟೋ ಯುವ ಜನರು ತಮ್ಮ ಬಗ್ಗೆ ತಾವೇ ಕೇಳರಿಮೆ ಹುಟ್ಟಿಸಿಕೊಂಡು ಒತ್ತಡಕ್ಕೆ ಸಿಲುಕಿರುತ್ತಾರೆ. ಆರೋಗ್ಯಕರ ಆಹಾರ ಸೇವನೆಯಿಂದ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು ಹಾಗಾಗಿ ತಿನ್ನುವ ಆಹಾರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವುದು ಅಗತ್ಯ ಪ್ರತಿದಿನ 20 ನಿಮಿಷಗಳ ಕಾಲ ವ್ಯಾಯಾಮ ಮಾಡುವುದನ್ನು ಆರಂಭಿಸಿ, ನಂತರ ಜಾಗಿಂಗ್ ಮಾಡುವುದನ್ನು ಸೈಕ್ಲಿಂಗ್ ಮಾಡುವುದನ್ನು ಅಭ್ಯಾಸ ಮಾಡಿ ಇದರ ಜೊತೆಗೆ ಆಹಾರ ಕ್ರಮದಲ್ಲೂ ಬದಲಾವಣೆ ಮಾಡಿಕೊಳ್ಳಿ. ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಸೇವಿಸಿ.

ಮನಸ್ಸಿಗೆ ಬಂದ ಸಮಯದಲ್ಲಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗಲು ಕಾರಣವಾಗಬಹುದು ನಿಮ್ಮ ಊಟದೊಂದಿಗೆ ಪ್ರೋಟೀನ್ ಹಾಗೂ ನಾರಿನ ಅಂಶ ಅಧಿಕವಾಗಿರುವಂತೆ ನೋಡಿಕೊಳ್ಳಿ ಬೆಳಗ್ಗಿನ ಉಪಹಾರ ಬಹಳ ಮುಖ್ಯ ಇದು ದೇಹದಲ್ಲಿ ಚಯಾಪಚಯ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗಾಗಿ ಬೆಳಗಿನ ಉಪಹಾರ ಆರೋಗ್ಯಕರವಾಗಿರಬೇಕು ಹಣ್ಣುಗಳು ಹಾಗೂ ತರಕಾರಿಯಿಂದ ತಯಾರಿಸಿದ ಸಲಾಡನ್ನು ಬೆಳಿಗ್ಗೆ ಸೇವಿಸುವುದು ಉತ್ತಮ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿಂದರೆ ಅದರಿಂದ ತೂಕಇಳಿಸಲು ತುಂಬಾ ನೆರವಾಗಲಿದೆ. ಯಾಕೆಂದರೆ ಈ ಹಣ್ಣಿನಲ್ಲಿರುವ ಪಪೈನ್ ಎನ್ನುವ ಅಂಶ ದೇಹದ ಕೊಬ್ಬನ್ನು ಕರಗಿಸಿ ಫ್ರೀ ರಾಡಿಕಲ್ ಗಳನ್ನು ದೂರ ಮಾಡುವುದು.ಇದು ಕಡಿಮೆ ಕ್ಯಾಲರಿಯನ್ನು ಹೊಂದಿದೆ.

ಲಿಂಬೆ ಹಣ್ಣಿನ ರಸವನ್ನು ಒಂದು ಲೋಟ ಬಿಸಿ ನೀರಿಗೆ ಹಿಂಡಿಕೊಂಡು ಸಕ್ಕರೆ ಮತ್ತು ಉಪ್ಪು ಹಾಕದೆ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ದೇಹದ ತೂಕ ಇಳಿಯುವುದು ಇದರಲ್ಲಿ ಹೇರಳವಾಗಿ ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚುವುದು. ಹಸಿವಿದ್ದಾಗ ಮಾತ್ರ ತಿನ್ನಿ ಪದೇಪದೇ ತಿನ್ನುವ ಅಭ್ಯಾಸವನ್ನು ಬಿಟ್ಟರೆ ತೂಕ ಇಳಿಸಬಹುದು. ಉತ್ತಮ ಸಮತೋಲಿತ ಆಹಾರ ಉತ್ತಮ ವ್ಯಾಯಾಮ ಹಾಗೂ ದಿನನಿತ್ಯ ಯೋಗಾಭ್ಯಾಸ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು. ಅಧಿಕ ತೂಕದಿಂದ ಅನೇಕ ಕಾಯಿಲೆಗಳು ಬರುವ ಸಾಧ್ಯತೆ ಇದೆ ಅವುಗಳಲ್ಲಿ ಪ್ರಮುಖವಾಗಿರುವುದು ಮಧುಮೇಹ  ರಕ್ತದೊತ್ತಡ ಥೈರಾಯಿಡ್ ಸಮಸ್ಯೆ ಸಂಧಿವಾತ ಹೃದಯ ಸಂಬಂಧಿ ಕಾಯಿಲೆಗಳು ಇತ್ಯಾದಿ..

Dr.ಜ್ಯೋತಿ ಕೆ., BAMS.MD( Ayurveda)

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

2 hours ago

ವೃಶ್ಚಿಕ ರಾಶಿ ಯುಗಾದಿ ಸಂವತ್ಸರದ ಫಲಗಳು | ಹೇಗಿದೆ ಈ ವರ್ಷ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

2 hours ago

ದೇವಸ್ಥಾನದ ಬ್ರಹ್ಮಕಲಶೋತ್ಸವಗಳಲ್ಲಿ “ರಾಜಕೀಯದ ಚಪ್ಪಲು” ಹೊರಗಿಡಬೇಕು |

ಒಂದು ದೇವಸ್ಥಾನದ ಎಂದರೆ ಶ್ರದ್ಧೆಯ ಕೇಂದ್ರ, ಒಂದು ಊರಿನ ದೇವಸ್ಥಾನ ಎಂದರೆ ಸೌಹಾದರ್ತೆಯ…

2 hours ago

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

10 hours ago

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…

12 hours ago