ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದ ಬಲಿಪ ನಾರಾಯಣ ಭಾಗವತರು (84 ) ಗುರುವಾರ ಸಂಜೆ ನಿಧನರಾಗಿದ್ದಾರೆ.
ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ಯಕ್ಷಗಾನದಲ್ಲಿ ಕಲಾಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ , ಸಾಮಗ ಪ್ರಶಸ್ತಿ , ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’, ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ , 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ
ಬಲಿಪ ನಾರಾಯಣ ಭಾಗವತರ ನಿಧನದಿಂದ ಯಕ್ಷ ರಂಗದ ಹಿರಿಯ ಚೇತನವೊಂದು ಅಗಲಿದಂತಾಗಿದೆ. ಬಲಿಪ ಪರಂಪರೆಯ ಕಂಚಿನ ಕಂಠ ಹಾಗೂ ಅಪಾರ ವಿದ್ವತ್ ನ ಜತೆ ಅವರು ಮೇರು ಸದೃಶ ವ್ಯಕ್ತಿತ್ವ ಹೊಂದಿದ್ದರು. ಯಕ್ಷರಂಗಕ್ಕೆ ಅವರು ನೀಡಿದ ಕೊಡುಗೆ ಶಾಶ್ವತವಾಗಿ ಅಭಿಮಾನಗಳ ಮನಸ್ಸಿನಲ್ಲಿ ಉಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪದಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel