Advertisement
ನಿಧನ‌ ಸುದ್ದಿಗಳು

ಬಲಿಪ ನಾರಾಯಣ ಭಾಗವತ ಇನ್ನಿಲ್ಲ |

Share

ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದ ಬಲಿಪ ನಾರಾಯಣ ಭಾಗವತರು  (84 ) ಗುರುವಾರ ಸಂಜೆ ನಿಧನರಾಗಿದ್ದಾರೆ.

ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಯಕ್ಷಗಾನದಲ್ಲಿ ಕಲಾಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ , ಸಾಮಗ ಪ್ರಶಸ್ತಿ ,  ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’, ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ ,  71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ
ಬಲಿಪ ನಾರಾಯಣ ಭಾಗವತರ ನಿಧನದಿಂದ ಯಕ್ಷ ರಂಗದ ಹಿರಿಯ ಚೇತನವೊಂದು ಅಗಲಿದಂತಾಗಿದೆ. ಬಲಿಪ ಪರಂಪರೆಯ ಕಂಚಿನ ಕಂಠ ಹಾಗೂ ಅಪಾರ ವಿದ್ವತ್ ನ ಜತೆ ಅವರು ಮೇರು ಸದೃಶ ವ್ಯಕ್ತಿತ್ವ ಹೊಂದಿದ್ದರು. ಯಕ್ಷರಂಗಕ್ಕೆ ಅವರು ನೀಡಿದ ಕೊಡುಗೆ ಶಾಶ್ವತವಾಗಿ ಅಭಿಮಾನಗಳ ಮನಸ್ಸಿನಲ್ಲಿ ಉಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪದಲ್ಲಿ‌ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

7 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

14 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

14 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

14 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago